ಯಧುವೀರ ಒಡೆಯರ್‍ರವರ ಗೆಲುವಿನ ಸಂಭ್ರಮ
ಸಂಜೆವಾಣಿ ನ್ಯೂಸ್
ಮೈಸೂರು.ಜೂ.05:- ಯಧುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ರವರ ಗೆಲುವಿನ ಸಂಭ್ರಮದಲ್ಲಿ ಕೃಷ್ಣರಾಜ ಕ್ಷೇತ್ರದ ಶಾಸಕರಾದ ಟಿ ಎಸ್ ಶ್ರೀವತ್ಸರವರು ನೂರೊಂದು ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆಯನ್ನು ನಡೆಸಿ ಸಾರ್ವಜನಿಕರಿಗೆ ಸಿಹಿವಿತರಣೆಯನ್ನು ಮಾಡಿ ವಿಜಯೋತ್ಸವವನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರುಗಳು ಉಪಸ್ಥಿತರಿದ್ದರು.