ಜೂ.6 ರಂದು ನಗರದಲ್ಲಿ ಗ್ರಾಮಾಂತರ ಬಸವ ಜಯಂತೋತ್ಸವ
ಸಂಜೆವಾಣಿ ವಾರ್ತೆ
ಚಾಮರಾಜನಗರ, ಜೂ.04- ನಗರದ ಸಿದ್ದಮಲ್ಲೇಶ್ವರ ವಿರಕ್ತಮಠ, ಮಠದ ಭಕ್ತ ವೃಂದದ ವತಿಯಿಂದ ಜೂ.6 ರಂದು ಗ್ರಾಮಾಂತರ ಬಸವ ಜಯಂತೋತ್ಸವ ಹಾಗೂ ಪೂಜ್ಯಶ್ಚಯರ ಸಂಸ್ಮರಣೋತ್ಸವ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ ಎಂದು ಶ್ರೀಸಿದ್ದಮಲ್ಲೇಶ್ವರ ವಿರಕ್ತಮಠದ ಚನ್ನಬಸವಸ್ವಾಮೀಜಿ ತಿಳಿಸಿದರು.
ಜಯಂತೋತ್ಸವ ಹಿನ್ನೆಲೆಯಲ್ಲಿ ಜೂ. 5 ರಿಂದಲೇ ಕಾರ್ಯಕ್ರಮಕ್ಕೆ ಚಾಲನೆ ಸಿಗಲಿದ್ದು, ಅಂದು ಬೆಳಿಗ್ಗೆ 5 ಗಂಟೆಗೆ ಪೂಜ್ಯರ ಗದ್ದುಗೆಗೆ ಬಿಲ್ವಾರ್ಚನೆ ಹಾಗೂ ಮಹಾಮಂಗಳಾರತಿ, 6 ಗಂಟೆಗೆ ಷಟ್ಟಲ ಧ್ವಜಾರೋಹಣ, 7 ಗಂಟೆಗೆ ಇಷ್ಟಲಿಂಗಪೂಜೆ, 11 ಗಂಟೆಗೆ ಪ್ರವಚನ ಕಾರ್ಯಕ್ರಮ ನಡೆಯಲಿದೆ ಎಂದು ಸುದ್ದಿಗೋಷ್ಟಿಯಲ್ಲಿ ಹೇಳಿದರು.ಅಲ್ಲದೇ ಗ್ರಾಮಾಂತರ ಭಜನಾ ಕಾರ್ಯಕ್ರಮ ನಡೆಯಲಿದ್ದು ಅಂದು ರಾತ್ರಿ 8 ಗಂಟೆಗೆ ಶ್ರೀ ಸಿದ್ದಮಲ್ಲೇಶ್ವರ ಕಲಾ ತಂಡದಿಂದ ‘ಪ್ರಭುಲಿಂಗಲೀಲೆ’ ಎಂಬ ನಾಟಕ ಏರ್ಪಡಿಸಲಾಗಿದೆ ಎಂದರು. ಜೂ. 6 ರಂದು ಬೆಳಗ್ಗೆ 10 ಗಂಟೆಗೆ ಗ್ರಾಮಾಂತರ ಬಸವ ಜಯಂತ್ಯುತ್ಸವಕ್ಕೆ ಚಾಲನೆ ಸಿಗಲಿದೆ. ದೇವನೂರು ಗುರುಮಲ್ಲೇಶ್ವರ ದಾಸೋಹ ಮಠದ ಮಹಾಂತಸ್ವಾಮೀಜಿ
ಮೆರವಣಿಗೆ ಸಾಗಲಿದೆ. 11 ಗಂಟೆಗೆ ಮಠದ ಹಾಸನ ಜಿಲ್ಲೆಯ ಮಲ್ಲಿಕಾರ್ಜನಬೆಟ್ಟದ ಬೇಲೂರು ಮಠದ ಮಹಾಂತ ಬಸವಲಿಂಗ ಸ್ವಾಮೀಜಿ ಅವರು ಪ್ರರ್ವಚನ ನೀಡಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ತೊರವಳ್ಳಿಯ ಟಿ.ಸಿ. ಸೋಮಣ್ಣ ಮತ್ತು ತಂಡದಿಂದ ಭಕ್ತಿಗೀತೆ ಕಾರ್ಯಕ್ರಮ ನಡೆಯಲಿದೆ. ಜಿಲ್ಲೆ ಹಾಗೂ ಹೊರ ಜಿಲ್ಲೆಗಳ ಹಲವು ಮಠಾಧೀಶರು ಪಾಲ್ಗೊಳ್ಳಲಿದ್ದಾರೆ.
ಎರಡು ದಿನಗಳ ಕಾಲ ನಿರಂತದ ವ್ಯವಸ್ಥೆ ಮಾಡಲಾಗಿದ್ದು, ಅಂದಾಜು 50 ಸಾವಿರ ಮಂದಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಹೇಳಿದರು.