ಚಪ್ಪರದ ಹಳ್ಳಿಗೆ ತಾಪಂ ಇಒ ಭೇಟಿ
ಸಂಜೆವಾಣಿ ವಾರ್ತೆ
ಬೆಟ್ಟದಪುರ:ಜೂ.04: ಕುಡಿಯುವ ನೀರು,ರಸ್ತೆ ಮತ್ತು ಚರಂಡಿ ವ್ಯವಸ್ಥೆ ಸರಿಪಡಿಸುವಂತೆ ಶನಿವಾರ ಚಪ್ಪರದಹಳ್ಳಿ ಗ್ರಾಮದ ಡೈರಿ ಬೀದಿಯ ನಿವಾಸಿಗಳು ಚಪ್ಪರದಹಳ್ಳಿ ಗ್ರಾಮ ಪಂಚಾಯಿತಿ ಮುಂಭಾಗ ಪ್ರತಿಭಟನೆ ನಡೆಸಿದ, ಹಿನ್ನಲೆ ಸೋಮವಾರ ಪಿರಿಯಾಪಟ್ಟಣ ತಾಲೂಕು ಪಂಚಾಯಿತಿ ಇಒ ಸುನಿಲ್ ಕುಮಾರ್ ಬೇಟಿ ನೀಡಿ, ಪರಿಶೀಲನೆ ಮಾಡಿದರು
ಚಪ್ಪರದಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಇಲ್ಲ. ಜಲಜೀವನ್ ಮಿಷನ್ ಕಾಮಗಾರಿ ನಡೆಯುತ್ತಿರುವುದರಿಂದ ಸಣ್ಣಪುಟ್ಟ ಸಮಸ್ಯೆಗಳಾಗಿರಬಹುದು. ಇನ್ನು ಮುಂದೆ ಯಾವುದೇ ಸಮಸ್ಯೆ ಆಗದಂತೆ ಕ್ರಮವಹಿಸುವಂತೆ ಪಂಚಾಯಿತಿ ಅಧಿಕಾರಿಗಳಿಗೆ ಸೂಚಿಸಿದರು. ರಸ್ತೆ ಮತ್ತು ಚರಂಡಿ ಅವ್ಯವಸ್ಥೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು ಕೂಡಲೇ ತಹಸಿಲ್ದಾರ್ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಚರ್ಚಿಸಿ ಶೀಘ್ರವೇ ಸಮಸ್ಯೆ ಪರಿಹರಿಸುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಸಿ.ಪಿ ಸುರೇಶ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕೆ.ಕೆ ಶ್ರೀದೇವಿ, ಕಾರ್ಯದರ್ಶಿ ಎಚ್. ಎಚ್ ಕುಮಾರ್, ಸಿಬ್ಬಂದಿಗಳಾದ ಮಂಜುನಾಥ್, ರಮಣಯ್ಯ, ಮಹೇಂದ್ರ, ಸ್ಥಳೀಯರು ಇದ್ದರು.