ಜುಲೈ 29 ರಿಂದ ವಿಶೇಷ ಜನತಾ ನ್ಯಾಯಾಲಯ ಆಯೋಜನೆ
ಧಾರವಾಡ,ಜೂ4: ಜುಲೈ 29 ರಿಂದ ಆ.3 ರವರೆಗೆ ಸರ್ವೋಚ್ಚ ನ್ಯಾಯಾಲಯದಲ್ಲಿರುವ ವಿವಿಧ ಪ್ರಕರಣಗಳನ್ನು ವಿಶೇಷ ಜನತಾ ನ್ಯಾಯಾಲಯದಲ್ಲಿ ಇತ್ಯರ್ಥಪಡಿಸಿಕೊಳ್ಳಲು ಸರ್ವೋಚ್ಚ ನ್ಯಾಯಾಲಯವು ಧಾರವಾಡ ಜಿಲ್ಲಾ ವ್ಯಾಪ್ತಿಯ ಕಕ್ಷಿದಾರರು, ವಿಡಿಯೋ ಕಾನ್ಸ್‍ರೆನ್ಸ್ ಮೂಲಕ ಹಾಜರಾಗಿ ಸರ್ವೋಚ್ಛ ನ್ಯಾಯಾಲಯದಲ್ಲಿರುವ ತಮ್ಮ ಪ್ರಕರಣಗಳನ್ನು ರಾಜಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಈ ಕುರಿತು ಸರ್ವೋಚ್ಚ ನ್ಯಾಯಾಲಯದಲ್ಲಿ ಪ್ರಕರಣ ಹೊಂದಿರುವ ಕಕ್ಷಿದಾರರಿಗೆ ಮಾಹಿತಿ, ನೋಟಿಸ್ ನೀಡಲು ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳು ಮತ್ತು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯ ಕಾರ್ಯನಿರ್ವಾಹಕ ಅಧ್ಯಕ್ಷರಾದ ನ್ಯಾಯಮೂರ್ತಿ ಕೆ. ಸೋಮಶೇಖರ ಅವರು ನಿರ್ದೇಶನ ನೀಡಿದ್ದಾರೆ. ಅದರಂತೆ ಕ್ರಮವಹಿಸಲಾಗುತ್ತಿದೆ ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾದೀಶೆ ಕೆ.ಜಿ.ಶಾಂತಿ ಅವರು ತಿಳಿಸಿದರು.
ಧಾರವಾಡ ಜಿಲ್ಲಾ ನ್ಯಾಯಾಲಯದ ವಿಡಿಯೋ ಸಂವಾದ ಸಭಾಂಗಣದಲ್ಲಿ ಮಾಧ್ಯಮಗೋಷ್ಟಿ ಜರುಗಿಸಿ, ಮಾಹಿತಿ ನೀಡಿ ಅವರು ಮಾತನಾಡಿದರು.
ಸರ್ವೋಚ್ಛ ನ್ಯಾಯಾಲಯದಲ್ಲಿ ಪ್ರಕರಣ ಹೊಂದಿದವರಿಗೆ ವಿಶೇಷ ಜನತಾ ನ್ಯಾಯಾಲಯದಲ್ಲಿ ಭಾಗವಹಿಸಿ, ಇತ್ಯರ್ಥಪಡಿಸಿಕೊಳ್ಳಲು ಜಿಲ್ಲಾ ನ್ಯಾಯಾಲಯದಲ್ಲಿ ಉಚಿತವಾಗಿ ವಿಡಿಯೋ ಕಾನ್ಪರೇನμï ಮತ್ತು ಇತರ ಅನಕೂಲಗಳನ್ನು ಮಾಡಿಕೊಡಲಾಗುತ್ತದೆ. ಜಿಲ್ಲಾ ಕಕ್ಷಿದಾರರಿಗೆ ಮತ್ತು ಸಾರ್ವಜನಿಕರಿಗೆ ಈ ಸಂಗತಿಯ ಬಗ್ಗೆ ಮುದ್ರಣ ಹಾಗೂ ವಿದ್ಯುನ್ಮಾನ ಮಾಧ್ಯಮಗಳ ಮೂಲಕ ವ್ಯಾಪಕ ಪ್ರಚಾರವನ್ನು ನೀಡಬೇಕು ಇದರಿಂದ ಬಡ ಮತ್ತು ರಾಜಿ ಅಗತ್ಯವಿರುವ ಕಕ್ಷಿಗಾರರಿಗೆ ಸಹಾಯವಾಗುತ್ತದೆ ಎಂದು ಅವರು ವಿನಂತಿಸಿದರು.
ಬರುವ ಜುಲೈ 13 ರಂದು ನಡೆಯಲಿರುವ ರಾಷ್ಟ್ರೀಯ ಲೋಕ ಅದಾಲತ್‍ನಲ್ಲೂ ಸಹ ಜಿಲ್ಲೆಯ ನ್ಯಾಯಾಲಯಗಳಲ್ಲಿ ಬಾಕಿ ಇರುವ ಸಿವಿಲ್ ದಾವೆಗಳು, ಚೆಕ್ ಬೌನ್ಸ್ ಪ್ರಕರಣಗಳು, ವಿವಾಹ ವಿಚ್ಛೇದನ ಹೊರತುಪಡಿಸಿ ಕೌಟುಂಬಿಕ ಪ್ರಕರಣಗಳು, ರಾಜಿ ಮಾಡಿಕೊಳ್ಳಬಹುದಾದ ಕ್ರಿಮಿನಲ್ ಪ್ರಕರಣಗಳು, ಎಲ್.ಎ.ಸಿ ಪ್ರಕಣಗಳು, ಅಪಘಾತ ಪರಿಹಾರ ಪ್ರಕರಣಗಳನ್ನು ರಾಜೀ ಸಂದಾನ ಮೂಲಕ ಇತ್ಯರ್ಥಪಡಿಸಲು ಪ್ರಕರಣಗಳ ಕಕ್ಷಿದಾರರು, ಇಲಾಖೆಗಳ ಅಧಿಕಾರಿಗಳು, ನ್ಯಾಯವಾದಿಗಳು ಸಹಕರಿಸಬೇಕೆಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾದೀಶೆ ಕೆ.ಜಿ.ಶಾಂತಿ ಅವರು ತಿಳಿಸಿದರು.
ಪತ್ರಿಕಾಗೋಷ್ಟಿಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪರುಶರಾಮ ದೊಡ್ಡಮನಿ ಅವರು ಇದ್ದರು.