ಕೂಲಿಕಾರ್ಮಿಕರ ಸಮಸ್ಯೆ ಬಗೆಹರಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ
ಬೀದರ:ಸೆ.24: ಜಿಲ್ಲೆಯ ಹುಮನಾಬಾದ ಪಟ್ಟಣದ ಕೈಗಾರಿಕಾ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿದ್ದ 70% ರಿಂದ 80% ರ ವರೆಗೆ ಕಂಪನಿಗಳು ಬಂದಾಗಿವೆ. ಇದರಿಂದ ಸದರಿ ಕಂಪನಿಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸುಮಾರು 5000 ಕ್ಕಿಂತ ಹೆಚ್ಚು ಕಾರ್ಮಿಕರು ತಮ್ಮ ಉದ್ಯೋಗವನ್ನು ಕಳೆದುಕೊಂಡು, ಅವರ ಕುಟುಂಬ ಬೀದಿ ಪಾಲಾಗಿರುತ್ತದೆ. ಅಲ್ಲದೇ ಈ ಬಡ ಕೂಲಿಕಾರ್ಮಿಕರಿಗೆ ಆರೋಗ್ಯ ಸೌಲಭ್ಯ ಕೂಡ ಇರುವುದಿಲ್ಲ. ಕೆಲಸ ಕಳೆದುಕೊಂಡ ಕೂಲಿಕಾರ್ಮಿಕರು ಕಂಪನಿಗಳಲ್ಲಿ ಸುಮಾರು ವರ್ಷಗಳಿಂದ ಸೇವೆ ಸಲ್ಲಿಸಿದ್ದು, ಕಂಪನಿಗಳು ಬಂದಾಗಿರುವುದರಿಂದ ಉದ್ಯೋಗ ಕಳೆದುಕೊಂಡ ಕೂಲಿ ಕಾರ್ಮಿಕರು ಸಮಸ್ಯೆಗೆ ಒಳಗಾಗಿದ್ದಾರೆ.
ಇದರಿಂದ ಉದ್ಯೋಗ ಕಳೆದುಕೊಂಡ ಕಾರ್ಮಿಕರ ಸಮಸ್ಯೆಯನ್ನು ಬಗೆಹರಿಸುವಂತೆ ಕರ್ನಾಟಕ ರಾಜ್ಯ ಕಾರ್ಮಿಕ ಪಡೆ (ರಿ) ಜಿಲ್ಲಾ ಘಟಕವು ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕ ಕಾರ್ಮಿಕ ಪಡೆಯ ಜಿಲ್ಲಾಧ್ಯಕ್ಷರಾದ ಸೋಮನಾಥ ಪಂಚಾಳ, ಕಾರ್ಯಾಧ್ಯಕ್ಷರಾದ ರಾಘವೇಂದ್ರ ಉಗ್ರಪ್ಪನೊರ್, ಪ್ರಶಾಂತ, ಅಲ್ತಾಫ್ ಇನ್ನೀತರ ಪದಾಧಿಕಾರಿಗಳು ಉಪಸ್ಥಿತರಿದ್ದರು.