ಮಕ್ಕಳ ಪ್ರತಿಭೆ ಹೊರತರಲು ಪ್ರತಿಭಾ ಕಾರಂಜಿ,ಕಲೋತ್ಸವ ಸಹಕಾರಿ
ಭಾಲ್ಕಿ:ಸೆ.24: ಮಕ್ಕಳಲ್ಲಿ ಅಡಗಿರುವ ಸೂಪ್ತ ಪ್ರತಿಭೆ ಹೊರತರಲು ಪ್ರತಿಭಾ ಕಾರಂಜಿಯಂತಹ ಸ್ಪರ್ಧೆಗಳು ಸಹಕಾರಿಯಾಗಿದೆ ಎಂದು ಗ್ರಾಮ ಪಂಚಾಯತಿ ಅಧ್ಯಕ್ಷ ವಿಜಯಕುಮಾರ ಗಾಮಾ ಹೇಳಿದರು.
ತಾಲೂಕಿನ ಭಾತಂಬ್ರಾ ಗ್ರಾಮದ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ 2023-24ನೆಯ ಸಾಲಿನ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳಲ್ಲಿ ಪ್ರತಿಭೆಗೆ ಕೊರತೆಯಿಲ್ಲ. ಆದರೆ ಅವರನ್ನು ಗುರುತಿಸಿ ಸೂಕ್ತ ವೇದಿಕೆ ಕಲ್ಪಿಸಿದರೆ ನಮ್ಮ ಮಕ್ಕಳು ಉತ್ತಮ ಸಾಧಕರಾಗಿ ಹೊರಹೊಮ್ಮಲ್ಲಿದ್ದಾರೆ ಎಂದು ವಿಶ್ವಾಸ ವ್ಯಕ್ತ ಪಡಿಸಿದರು.
ಎಸ್‍ಡಿಎಂಸಿ ಅಧ್ಯಕ್ಷ ಜೈಪಾಲ್ ಜಾಧವ ಅಧ್ಯಕ್ಷತೆ ವಹಿಸಿದರು.
ಈ ಸಂದರ್ಭದಲ್ಲಿ ಶಿಕ್ಷಣ ಸಂಯೋಜಕ ಸಹದೇವ್ ಗೌಂಡಗಾವೆ, ಎಸ್‍ಡಿಎಂಸಿ ಉಪಾಧ್ಯಕ್ಷೆ ಪಂಕಜಾ ಸ್ವಾಮಿ, ತಾಲೂಕು ಮುಖ್ಯಗುರುಗಳ ಸಂಘದ ಅಧ್ಯಕ್ಷ ಅಶೋಕ ತಾಂಬೋಳೆ, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ರವಿಚಂದ್ರ ಮೈನಾಳೆ, ಮುಖ್ಯಗುರು ರಾಜಕುಮಾರ ಪಾಲಾಪುರೆ, ಶಿಕ್ಷಕರಾದ ಸಂತೋಷ ವಾಡೆ, ಚಂದ್ರಕಲಾ ಡಿಗ್ಗೆ ಸೇರಿದಂತೆ ಹಲವರು ಇದ್ದರು.
ಸಿಆರ್‍ಪಿ ಸಂತೋಷಕುಮಾರಿ ವಾಡೆ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಜೇತ ಮಕ್ಕಳಿಗೆ ಪ್ರಶಸ್ತಿ ಪತ್ರ ನೀಡಲಾಯಿತು. ವಿಜಯಲಕ್ಷ್ಮಿ ನಿರೂಪಿಸಿದರು. ಉಮಾದೇವಿ ವಾರದ ವಂದಿಸಿದರು.