ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ಮತದಾನ
ಸಂಜೆವಾಣಿ ವಾರ್ತೆ
ವಿಜಯನಗರ, ಜೂ,3- ಕರ್ನಾಟಕ ವಿಧಾನ ಪರಿಷತ್ತಿನ  ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ಜಿಲ್ಲೆಯಾದ್ಯಂತ 21 ಮತಗಟ್ಟೆಗಳು ಇದ್ದು, ಬೆಳಿಗ್ಗೆ 8 ಗಂಟೆಯಿಂದಲೇ ಮತದಾನ ಪ್ರಾರಂಭವಾಗಿ  ಮಂದಗತಿಯಲ್ಲಿ ಸಾಗಿತ್ತು. ಮಧ್ಯಾಹ್ನ 12 ಗಂಟೆಯವರೆಗೆ ಶೇಕಡ 23.99 ರಷ್ಟು  ಮತದಾನವಾಗಿದೆ.  ಹೊಸಪೇಟೆ ನಗರದ ಚಿತ್ತವಾಡಗಿಯ  ಸರಕಾರಿ  ಪ್ರೌಢಶಾಲೆಯಲ್ಲಿರುವ ಮತಗಟ್ಟೆಯಲ್ಲಿ  ಇದೇ ಮೊದಲ ಬಾರಿಗೆ ಮತದಾನ ಮಾಡಿದ ಸರ್ಕಾರಿ ಪ್ರಾಥಮಿಕ  ಶಾಲೆಯ ಶಿಕ್ಷಕರಾದ ಮಾರುತಿ ತಮ್ಮ ಅನಿಸಿಕೆಯನ್ನು ಹಂಚಿಕೊಂಡರು.