ವಿಧಾನ ಪರಿಷತ್ತಿಗೆ ಜಗದೇವ ಗುತ್ತೇದಾರ :ಅಲ್ಲಮಪ್ರಭು ಹರ್ಷ
ಕಲಬುರಗಿ,ಜೂ 3: ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ಜೂ 13 ರಂದು ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಕಲಬುರಗಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಗದೇವ ಗುತ್ತೇದಾರ ಅವರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಿದೆ.
ಜಗದೇವ ಗುತ್ತೇದಾರ ಆಯ್ಕೆಗೆ ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಹರ್ಷ ವ್ಯಕ್ತ ಪಡಿಸಿದ್ದಾರೆ. ಜಗದೇವ ಗುತ್ತೇದಾರ ಅವರು ಪಕ್ಷಕ್ಕಾಗಿ ಸಲ್ಲಿಸಿದ ನಿಸ್ವಾರ್ಥ,ಅವಿರತ ಸೇವೆಯ ಪ್ರತಿಫಲ ಇದಾಗಿದೆ ಎಂದಿದ್ದಾರೆ.
ವಿಧಾನ ಪರಿಷತ್ತು ಚುನಾವಣೆಗೆ ಜಗದೇವ ಗುತ್ತೇದಾರ ಅವರನ್ನು ಆಯ್ಕೆ ಮಾಡಿದ್ದಕ್ಕೆ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ,ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ, ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.