ರಾಷ್ಟ್ರದ ಒಳಿತಿಗೆ ಅಧಿಕಾರಿಗಳು ಕೆಲಸ ಮಾಡಿದರೆ ಭ್ರಷ್ಟಾಚಾರ ನಿರ್ಮೂಲನೆ: ಜಿ. ಬಿ. ವಿನಯ್ ಕುಮಾರ್ ಅಭಿಮತ
ಸಂಜೆವಾಣಿ ವಾರ್ತೆ
ದಾವಣಗೆರೆ.ಜೂ.೨; ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಮದ್ರಾಸ್ ಹಾಗೂ ಇನ್ ಸೈಟ್ಸ್ ಐಎಎಸ್ ಸಹಯೋಗದಲ್ಲಿ, ಐಎಎಸ್, ಐಪಿಎಸ್ ಅಧಿಕಾರಿಗಳಾಗಬೇಕೆಂಬ ಕನಸು ಹೊತ್ತಿರುವ ವಿದ್ಯಾರ್ಥಿಗಳು ಹಾಗೂಆಕಾಂಕ್ಷಿಗಳಿಗೆ ಮಾರ್ಗದರ್ಶನ ನೀಡುವ ಸಲುವಾಗಿ ಉಪನ್ಯಾಸ ಕಾರ್ಯಕ್ರಮವು ಮದ್ರಾಸ್ ನ ಐಐಟಿ ಸಭಾಂಗಣದಲ್ಲಿ ನಡೆಯಿತು.ಕಾರ್ಯಕ್ರಮದಲ್ಲಿ ಮಾರ್ಗದರ್ಶನ ನೀಡಿದ ಇನ್ಸೈಟ್ಸ್ ಸಂಸ್ಥೆ ಸಂಸ್ಥಾಪಕ ನಿರ್ದೇಶಕ ಜಿ. ಬಿ. ವಿನಯ್ ಕುಮಾರ್ ಅವರು, ಅಧಿಕಾರಿಗಳು ಮತ್ತು ರಾಜಕಾರಣಿಗಳು ರಾಜಕೀಯ ತಟಸ್ಥತೆಯನ್ನು ಉಳಿಸಿಕೊಂಡು ರಾಷ್ಟ್ರದ ಒಳಿತಿಗಾಗಿ ಒಟ್ಟಾಗಿ ಕೆಲಸ ಮಾಡಬೇಕು. ಆಗ ಮಾತ್ರ ಆಡಳಿತದಲ್ಲಿ ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಬಹುದಲ್ಲದೇ, ಜನಪರ ನೀತಿಗಳನ್ನು ಜಾರಿಗೊಳಿಸಬಹುದು ಹಾಗೂ ಪ್ರಜಾಪ್ರಭುತ್ವದಮೌಲ್ಯಗಳನ್ನು ಎತ್ತಿ ಹಿಡಿಯಬಹುದು ಎಂದು ಸಲಹೆ ನೀಡಿದರು.