ಸೆ.30ರ ಕರ್ನಾಟಕ ಸಂಭ್ರಮ-50 ಕಾರ್ಯಕ್ರಮ ಯಶಸ್ವಿಗೊಳಿಸಿ: ಸೋಮಣ್ಣ ಬೇವಿನಮರದ
ವಿಜಯಪುರ,ಸೆ.24: ಕರ್ನಾಟಕ ಸಂಭ್ರಮ-50ರ ಕಾರ್ಯಕ್ರಮವನ್ನು ಅದ್ದೂರಿ ಆಚರಣೆಯೊಂದಿಗೆ ಅರ್ಥಪೂರ್ಣವಾಗಿ ಆಯೋಜಿಸಲಾಗುವುದು ಎಂದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷÀ ಸೋಮಣ್ಣ ಬೇವಿನಮರದ ಹೇಳಿದರು.
ಸೋಮವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಸಂಭ್ರಮ-50ರ ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಅಭಿಯಾನದ ಅಂಗವಾಗಿ ಹೊರನಾಡಿನಲ್ಲಿ ಆಯೋಜಿಸುತ್ತಿರುವ ಕರ್ನಾಟಕ ಸಂಭ್ರಮ-50ರ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಗೆ ಹೊಂದಿಕೊಂಡಿರುವ ಮಹಾರಾಷ್ಟದ ಸಾಂಗ್ಲಿ ಜಿಲ್ಲೆಯ ಜತ್ತ ತಾಲೂಕಿನ ಗುಡ್ಡಾಪುರ ಶ್ರೀ ದಾನಮ್ಮದೇವಿ ದೇವಸ್ಥಾನದ ಆವರಣದಲ್ಲಿ ಸೆಪ್ಟೆಂಬರ್ 30ರಂದು ಮುಖ್ಯಮಂತ್ರಿಗಳು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕರ್ನಾಟಕ ಗಡಿನಾಡ ಹಿರಿಯ ಚೇತನಗಳಾದ ಪೂಜ್ಯ ಶ್ರೀ ಡಾ. ಚನ್ನಬಸವ ಪಟ್ಟದೇವರು, ಡಾ.ಜಯದೇವಿ ತಾಯಿ ಲಿಗಾಡೆ ಹಾಗೂ ನಾಡೋಜ ಡಾ. ಕಯ್ಯಾರ ಕಿಞಣ್ಣ ರೈ ಅವರ ಹೆಸರಿನಲ್ಲಿ ಸ್ಥಾಪಿಸಲಾದ ಗಡಿನಾಡ ಚೇತನ ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಈ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಹಾಗೂ ವಿಜೃಂಭಣೆಯಿಂದ ಆಯೋಜಿಸಲು ಈಗಾಗಲೇ ಸಭೆ ನಡೆಸಿ ಎಲ್ಲ ರೀತಿಯ ಸಹಾಯ ಸಹಕಾರ ಕೋರಲಾಗಿದೆ. ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿ ಜತ್ತ ತಾಲೂಕಿನ ಗುಡ್ಡಾಪೂರದ ಶ್ರೀದಾನಮ್ಮದೇವಿ ದೇವಸ್ಥಾನದಲ್ಲಿ ಇರುವುದರಿಂದ ಸಾಂಗ್ಲಿಯ ಜಿಲ್ಲಾಡಳಿದ ಸಹಕಾರ ಕೋರಲಾಗಿದೆ ಎಂದು ಅವರು ಹೇಳಿದರು.
ಎಲ್ಲರ ಸಹಕಾರದೊಂದಿಗೆ ಅದ್ದೂರಿಯಾಗಿ ಸಂಭ್ರಮದಿಂದ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದ್ದು, ಈ ಸಂದರ್ಭದಲ್ಲಿ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿವೆ. ಕಾರ್ಯಕ್ರಮದಲ್ಲಿ ಸ್ವಾಗತ, ಮೆರವಣಿಗೆ, ವೇದಿಕೆ ನಿರ್ವಹಣೆ ಮತ್ತು ನಿರ್ಮಾಣ, ಸಾಂಸ್ಕøತಿಕ ಕಾರ್ಯಕ್ರಮ, ಸಾರಿಗೆ, ವಸತಿ, ಪ್ರಚಾರ, ಆರೋಗ್ಯ, ಸ್ವಚ್ಚತಾ, ಭದ್ರತೆ ಹಾಗೂ ಊಟೋಪಚಾರ ಸಮಿತಿಗಳನ್ನು ರಚಿಸಲಾಗಿದೆ. ಸಮಿತಿಗಳು ತಮಗೆ ವಹಿಸಲಾದ ಜವಾಬ್ದಾರಿಗಳನ್ನು ಅತ್ಯಂತ ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸುವಂತೆ ಸೂಚಿಸಿದರು.
ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಲಿರುವುದರಿಂದ, ಸುಸಜ್ಜಿತ ಶಾಮಿಯಾನ, ಕುಡಿಯುವ ನೀರಿನ ವ್ಯವಸ್ಥೆಗೆ ಕ್ರಮವಹಿಸಲಾಗುತ್ತಿದೆ. ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸುವ ನಿಟ್ಟಿನಲ್ಲಿ ಎಲ್ಲರೂ ಸಹಕರಿಸುವಂತೆ ಅವರು ತಿಳಿಸಿದರು.
ಶಾಸಕ ವಿಠ್ಠಲ ಕಟಕದೊಂಡ ಅವರು ಮಾತನಾಡಿ, ಕಾರ್ಯಕ್ರಮದ ಯಶಸ್ಸಿಗೆ ಎಲ್ಲಾ ಕನ್ನಡಪರ ಸಂಘ-ಸಂಸ್ಥೆಗಳು, ಸಾರ್ವಜನಿಕರು ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಹೇಳಿದರು.
ಜಿಲ್ಲಾಧಿಕಾರಿ ಟಿ.ಭೂಬಾಲನ್ ಮಾತನಾಡಿ, ಕಾರ್ಯಕ್ರಮಕ್ಕೆ ಜಿಲ್ಲಾಡಳಿತ ಎಲ್ಲ ರೀತಿಯ ಸಹಾಯ ಸಹಕಾರ ನೀಡುವುದಾಗಿ ತಿಳಿಸಿದರು.
ಸಭೆಯಲ್ಲಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ ಮತ್ತಿಹಳ್ಳಿ, ಸದಸ್ಯÀ ಡಾ.ಎಮ್.ಎಸ್ ಮಧಬಾವಿ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಜಂಟಿ ನಿರ್ದೇಶಕÀ ಅಶೋಕ ಚಲವಾದಿ, ಬೆಳಗಾವಿ ವಿಭಾಗದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ಕೆ.ಎಚ್. ಚನ್ನೂರ ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತÀ ರಾಜಶೇಖರ ಡಂಬಳ, ನಗರಾಭಿವೃದ್ಧಿ ಇಲಾಖೆಯ ಯೋಜನಾ ನಿರ್ದೇಶಕÀ ಬದ್ರುದ್ಧಿನ್ ಸೌದಾಗರ್, ಜಿಲ್ಲಾ ಹೆಚ್ಚುವರಿ ಪೆÇಲೀಸ್ ವರಿμÁ್ಠಧಿಕಾರಿ ರಾಮನಗೌಡ ಹಟ್ಟಿ, ಆಹಾರ ಇಲಾಖೆಯ ಉಪ ನಿರ್ದೇಶಕ ವಿನಯಕುಮಾರ ಪಾಟೀಲ, ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ಭಜಂತ್ರಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕÀ ಸಂತೋಷ ಬೋವಿ ಸೇರಿದಂತೆ ವಿವಿಧ ತಾಲೂಕಿನ ತಹಶೀಲ್ದಾರರು, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.