ಪರಿಸರ ದಿನಾಚರಣೆ ಜಾಗೃತಿ
ನವಲಗುಂದ, ಜೂ2 : ಮಾನವನ ದುರಾಸೆಯಿಂದ ಪರಿಸರ ಹಾಳಾಗುತ್ತಿದ್ದು, ಇದು ಮಾನವನಿಂದಲೇ ಸರಿಯಾಗಬೇಕಿದೆ. ಮುಂದಿನ ಪೀಳಿಗೆಗೆ ಪರಿಸರದ ಬಗ್ಗೆ ಕಾಳಜಿ ಮೂಡಿಸದಿದ್ದರೆ ಮುಂದೆ ಹೆಚ್ಚಿನ ಅಪಾಯ ಎದುರಾಗಲಿದೆ ಎಂದು ಶಿಕ್ಷಕ ಎಸ್ ಸಿ ಹೊಳೆಯಣ್ಣವರ ಆತಂಕ ವ್ಯಕ್ತಪಡಿಸಿದರು.
ಅವರು ತಾಲ್ಲೂಕಿನ ನಾಗನೂರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಹೋಬಳಿ ಘಟಕ ಮೊರಬ ವತಿಯಿಂದ ಹಮ್ಮಿಕೊಂಡ ಪರಿಸರ ದಿನಾಚರಣೆಯ ಜಾಗೃತಿ ಕಾರ್ಯಕ್ರಮದ ಅಥಿತಿಗಳಾಗಿ ಭಾಗವಹಿಸಿ ಮಾತನಾಡಿದ ಅವರು ನೆಲ, ಮಣ್ಣು, ಬೆಳೆ, ಹಣ್ಣು ಹಂಪಲು ಹೀಗೆ ಎಲ್ಲವೂ ಉಳಿಯುವಂತಾಗಬೇಕು. ಆದರೆ ಇದು ಒಂದು ದಿನಕ್ಕೆ ಸೀಮಿತವಾಗದೇ ಪರಿಸರ ಕಾಳಜಿ ನಿರಂತರವಾಗಿರಲಿ’ ಎಂದರು
ಕಸಾಪ ಮೊರಬ ಹೋಬಳಿ ಅಧ್ಯಕ್ಷ ಬಿ ಎಚ್ ಹೂಗಾರ ಅವರು ಮಕ್ಕಳ ಜೊತೆಗೂಡಿಕೊಂಡು ಜಾನಪದ, ಪರಿಸರ ಜಾಗೃತಿ ಗೀತೆಗಳನ್ನು ಪ್ರಸ್ತುತಪಡಿಸಿದರು. ಇದೇ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರಾದ ಎಸ್ ಎಚ್ ಹರಕುಣಿಯವರನ್ನು ಪರಿಷತ್ತಿನ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಎಸ್ ಡಿ ಎಮ್ ಸಿ ಅಧ್ಯಕ್ಷ ಅಶೋಕ ತಳವಾರ ಅಧ್ಯಕ್ಷತೆ ವಹಿಸಿದ್ದರು.
ಗ್ರಾಮದ ಶರೀಫ ಬೆಟಗೇರಿ ಶಿಕ್ಷಕರಾದ ಆರ್ ಆಯ್ ಉಳ್ಳಾಗಡ್ಡಿ, ಪಿ ಎಚ್ ನಾವಳ್ಳಿ, ಎಲ್ ವಾಯ್ ಮೂಲಿಮನಿ, ಸಿರಿನ್ ತಾಜ್ ಭಾವಿಕಟ್ಟಿ ಹಾಗೂ ವಿದ್ಯಾರ್ಥಿಗಳು ಪರಿಷತ್ ಸದಸ್ಯರು ಉಪಸ್ಥಿತರಿದ್ದರು.