ಐವತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ರಕ್ತದಾನ
ಕಲಬುರಗಿ,ಜೂ.2-ನಗರದ ಪ್ರತಿಷ್ಠಿತ ಲುಕಮಾನ್ ಔಷಧ ವಿಜ್ಞಾನ ಮಹಾವಿದ್ಯಾಲಯ ಮತ್ತು ಇಂಡಿಯನ್ ರೆಡ್‍ಕ್ರಾಸ್ ಸೊಸೈಟಿ ಸಂಯುಕ್ತಾಶ್ರಯದಲ್ಲಿ ಮಹಾವಿದ್ಯಾಲಯದ ಆವರಣದಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಸಂಸ್ಥಾಪಕ ಕಾರ್ಯದರ್ಶಿ ಡಾ.ಸೈಯದ್ ರೆಹಮತ್ ಉಲ್ಲಾ ಹಾಗೂ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಉದ್ಘಾಟಿಸಿದರು. ಇಂಡಿಯನ್ ರೆಡ್‍ಕ್ರಾಸ್ ಸಂಸ್ಥೆ ಕಲಬುರಗಿ ಘಟಕದ ಅಧ್ಯಕ್ಷ ಅರುಣ್ ಕುಮಾರ್ ಲೋಯಾ, ಹೈಕ ಶಿಕ್ಷಣ ಸಂಸ್ಥೆಯ ಔಷಧ ವಿಜ್ಞಾನ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ನಿತಿನ್ ಮಹೂರಕರ್, ರಾಜೀವ ಗಾಂಧಿ ಔಷಧ ವಿಜ್ಞಾನ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಅಶೋಕ ಮಾಲಪಾನಿ, ಅಲ್ ಬದರ್ ದಂತ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಸೈಯದ್ ಜಕಾಉಲ್ಲಾ, ಡಿಎಸ್‍ಆರ್ ಔಷಧ ವಿಜ್ಞಾನ ಮಹಾವಿದ್ಯಾಲಯದ ನಿರ್ದೇಶಕ ಸೈಯದ್ ಸಮೀಉಲ್ಲಾ, ಡಾ.ಅರುಣ್ ಕುಮಾರ್ ಬೆಕನಾಳ, ಡಾ.ಸಂತೋಷ ಗಾದಾ, ಇಂಡಿಯನ್ ರೆಡ್‍ಕ್ರಾಸ್ ಸಂಸ್ಥೆ ಕಾರ್ಯದರ್ಶಿ ರವೀಂದ್ರ ಶಾಬಾದಿ, ಶಿಬಿರದ ಸಂಯೋಜಕ ಡಾ.ಸೈಯದ್ ಸನಾಉಲ್ಲಾ, ಕಾಲೇಜಿನ ಪ್ರಾಂಶುಪಾಲರು, ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಭಾಗವಹಿಸಿದ್ದರು. 50ಕ್ಕೂ ಹೆಚ್ಚು ಜನ ವಿದ್ಯಾರ್ಥಿಗಳು ರಕ್ತದಾನ ಮಾಡಿದರು.