ಕೇರಳದಲ್ಲಿ ಮಾನ್ಸೂನ್ ಆಗಮನ ಹಿನ್ನೆಲೆ :ಜಿಲ್ಲೆಯಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಸೂಚನೆ
ಸಂಜೆವಾಣಿ ವಾರ್ತೆ
ಚಾಮರಾಜನಗರ, ಆ್ರ.02- ಕೇರಳ ಕರಾವಳಿ ಮತ್ತು ಈಶಾನ್ಯ ಭಾಗಗಳಲ್ಲಿ ನೈಋತ್ಯ ಮಾನ್ಸೂನ್ ಅಪ್ಪಳಿಸಲಿದ್ದು, ಕೆಲವೇ ಗಂಟೆಗಳಲ್ಲಿ ಮುಂಗಾರು ಆಗಮಿಸುವ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿರುವ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆಯಲ್ಲಿ ಅಗತ್ಯ ಮಳೆ ಮುನ್ನೆಚ್ಚರಿಕೆ ಕ್ರಮಗಳನ್ನು ಸಮಾರೋಪಾದಿಯಲ್ಲಿ ಕೈಗೊಳ್ಳುವಂತೆ ಎಂದು ಜಿಲ್ಲಾಧಿಕಾರಿ ಶಿಲ್ಪಾನಾಗ್ ರವರು ತಿಳಿಸಿದ್ದಾರೆ.
ಕೇರಳದಲ್ಲಿ ಮಾನ್ಸೂನ್ ಆಗಮಿಸಿರುವುದರಿಂದ ಇದಕ್ಕೆ ಪೂರಕವಾಗಿ ಮುಂದಿನ 48 ಗಂಟೆಗಳಲ್ಲಿ ಕರ್ನಾಟಕದಲ್ಲಿ ಹೆಚ್ಚಿನ ಮಳೆಯಾಗುವ ಸಂಭವವಿದ್ದು, ಚಾಮರಾಜನಗರ ಜಿಲ್ಲೆಯಲ್ಲಿಯೂ ಸಹ ಇಂದಿನಿಂದ ಜೂನ್ 7ರವರೆಗೆ ಜಿಲ್ಲೆಯಾದ್ಯಂತ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಪ್ರವಾಹ ಪೀಡಿತಗ್ರಾಮ, ಪ್ರದೇಶಗಳನ್ನು ಗುರುತಿಸಿ ಮಳೆಯಿಂದ ನೀರು ತುಂಬಿಕೊಳ್ಳುವ ತಗ್ಗು ಪ್ರದೇಶಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಇದಕ್ಕಾಗಿಎಲ್ಲಾಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿಕೇಂದ್ರಸ್ಥಾನದಲ್ಲಿದ್ದು, ಸೂಕ್ತ ಕ್ರಮ ಕೈಗೊಳ್ಳಬೇಕು.
ತಪ್ಪಿದ್ದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ-2005ರ ಸೆಕ್ಷನ್ 51 ರಿಂದ 60ರವರೆಗೆ ಅನ್ವಯವಾಗಬಹುದಾದ ಕಲಂ ರನ್ವಯಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.