ಹುಟ್ಟು ಹಬ್ಬದ ಪ್ರಯುಕ್ತ ಹಣ್ಣು ಹಂಪಲು ವಿತರಣೆ
ಸಂಜೆವಾಣಿ ವಾರ್ತೆ
ಕೆ.ಆರ್.ಪೇಟೆ.ಜೂ.02: ಪಟ್ಟಣದ ದುಂಡುಶೆಟ್ಟಿ ಲಕ್ಷ್ಮಮ್ಮ ಸ್ಮಾರಕ ಸಾರ್ವಜನಿಕ ಆಸ್ಪತ್ರೆಯ ಒಳ ರೋಗಿಗಳಿಗೆ ಹಣ್ಣು ಹಂಪಲು ವಿತರಿಸುವ ಮೂಲಕ ತಾಲೂಕು ಕಾಂಗ್ರೆಸ್ ಕಾರ್ಯಕರ್ತರು ರಾಜ್ಯ ಕೃಷಿ ಸಚಿವ ಎನ್.ಚಲುವರಾಯಸ್ವಾಮಿಯ ಹುಟ್ಟು ಹಬ್ಬ ಆಚರಿಸಿ ಸಚಿವರಿಗೆ ಶುಭ ಹಾರೈಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ನಾಗೇಂದ್ರಕುಮಾರ್ ನೇತೃತ್ವದಲ್ಲಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಆಗಮಿಸಿದ ಕಾಂಗ್ರೆಸ್ ಕಾರ್ಯಕರ್ತರು ಸಚಿವ ಎನ್.ಚಲುವರಾಯಸ್ವಾಮಿ ಅವರ ಹುಟ್ಟುಹಬ್ಬಕ್ಕೆ ಶುಭ ಹಾರೈಸಿ ರೋಗಿಗಳಿಗೆ ಹಣ್ಣ ಹಂಪಲು ವಿತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮಿತ್ರ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಹಾಗು ಕಾಂಗ್ರೆಸ್ ಮುಖಂಡ ವಿಜಯ್ ರಾಮೇಗೌಡ ಸಚಿವ ಎನ್.ಚಲುವರಾಯಸ್ವಾಮಿ ಅವರು ನಡೆದು ಬಂದ ದಾರಿಯನ್ನು ಸ್ಮರಿಸಿದರು. ಚಲುವರಾಯಸ್ವಾಮಿ ಸಚಿವರಾಗಿದ್ದರೂ ಸರಳತೆಯನ್ನು ಮೈಗೂಡಿಸಿಕೊಂಡಿರುವ ರಾಜಕಾರಣಿ. ಸದಾ ಜನಪರ ತುಡಿತ ಹೊಂದಿದ್ದಾರೆ. ಕೃಷಿ ಸಚಿವರಾಗಿ ರೈತಪರ ಕಾಳಜಿ ಹೊಂದಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರಾಗಿ ಜಿಲೆಯ ಎಲ್ಲಾ ರಾಜಕಾರಣಿಗಳೊಂದಿಗೆ ಸ್ನೇಹ ಸಂಬಂಧ ಹೊಂದಿದ್ದು ಜಿಲ್ಲೆಯ ಅಭಿವೃದ್ದಿಗಾಗಿ ಶ್ರಮಿಸುತ್ತಿದ್ದಾರೆ. ಭಗವಂತ ಸಚಿವ ಎನ್.ಚಲುವರಾಯಸ್ವಾಮಿ ಅವರಿಗೆ ಮತ್ತಷ್ಟು ಹೆಚ್ಚಿನ ಅಧಿಕಾರ, ಆಯಸ್ಸು ಮತ್ತು ಆರೋಗ್ಯ ನೀಡಲಿ ಎಂದು ಆಶಿಸಿದರು.
ತಾಲೂಕು ಕಾಂಗ್ರೆಸ್ ಮುಖಂಡ ಬಿ.ಎಲ್.ದೇವರಾಜು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ನಾಗೇಂದ್ರ ಕುಮಾರ್, ಮುಖಂಡರಾದ ಕಿಕ್ಕೇರಿ ಸುರೇಶ್, ಎಂ.ಡಿ.ಕೃಷ್ಣಮೂರ್ತಿ, ರಾಜಯ್ಯ, ಇಲಿಯಾಸ್, ಲಕ್ಷ್ಮೀಪುರ ಚಂದ್ರೇಗೌಡ ಟಿ.ಎನ್.ದಿವಾಕರ್, ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಶಶಿಧರ್ ಸೇರಿದಂತೆ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.