ದಾನ ಧರ್ಮದಿಂದ ನೆಮ್ಮದಿ ಪಡೆಯಬಹುದು
ಸಂಜೆವಾಣಿ ವಾರ್ತೆ
ಕೆ.ಆರ್.ಪೇಟೆ.ಜೂ.02: ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ನಾಟನಹಳ್ಳಿ ಗ್ರಾಮದ ಶ್ರೀ ಹೊನ್ನಾಲದೇವಿ ಅಮ್ಮನವರ ಉತ್ಸವ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡ ಹಾಗೂ ಮಿತ್ರ ಫೌಂಡೇಶನ್ ಅಧ್ಯಕ್ಷರಾದ ವಿಜಯ್ ರಾಮೇಗೌಡ ಭಾಗವಹಿಸಿ ವಿಶೇಷ ಪೂಜೆ ಸಲ್ಲಿಸಿ ಗ್ರಾಮಸ್ಥರಿಂದ ಅಭಿನಂದನೆ ಸ್ವೀಕರಿಸಿದರು.
ಈ ವೇಳೆ ಮಾತನಾಡಿದ ವಿಜಯ್ ರಾಮೇಗೌಡ ಅವರು ಮನುಷ್ಯನಿಗೆ ಬೇಕಾದ ಶಾಂತಿ-ನೆಮ್ಮದಿಯನ್ನು ಮಾರುಕಟ್ಟೆಯಲ್ಲಿ ಕೊಂಡುಕೊಳ್ಳಲು ಸಾಧ್ಯವಿಲ್ಲ ಕೇವಲ ದೇವರ ಮೊರೆ ಹೋಗುವುದರಿಂದ, ಬಡವರಿಗೆ ನಿರ್ಗತಿಕರಿಗೆ ಧಾನ ಧರ್ಮಗಳನ್ನು ಮಾಡುವುದರಿಂದ ಪಡೆಯಬಹುದಾಗಿದೆ.
ಶಾಂತಿ ನೆಮ್ಮದಿಯ ತಾಣವಾಗಿರುವ ದೇವಾಲಯಗಳನ್ನು ಉಳಿಸಿ ಬೆಳೆಸುವುದು ನಮ್ಮ ಜವಾಬ್ದಾರಿಯಾಗಿದೆ. ಹಾಗಾಗಿ ಪ್ರತಿಯೊಬ್ಬರು ಧಾನ ಧರ್ಮದ ಗುಣಗಳನ್ನು ಬೆಳೆಸಿಕೊಳ್ಳಬೇಕು. ಈ ಮೂಲಕ ಸಂಸ್ಕೃತಿ ಪರಂಪರೆಯನ್ನು ಉಳಿಸಲು ಕೈಜೋಡಿಸಬೇಕು ಎಂದು ವಿಜಯ್ ರಾಮೇಗೌಡ ರವರು ಮನವಿ ಮಾಡಿದರು.
ಗ್ರಾಮದ ಮುಖಂಡ ತಾಲ್ಲೂಕು ಪಂಚಾಯತಿ ಮಾಜಿ ಸದಸ್ಯ ನಿಂಗೇಗೌಡ ಮಾತನಾಡಿ ನಮ್ಮ ತಾಲ್ಲೂಕಿನ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು, ಕ್ರೀಡಾ ಚಟುವಟಿಕೆಗೆ, ಪೌರಾಣಿಕ ನಾಟಕಗಳಿಗೆ ದೇವಾಲಯಗಳ ಜೀರ್ಣೋದ್ಧಾರ ಸೇರಿದಂತೆ ಹಲವಾರು ಕಾರ್ಯಕ್ರಮಗಳಿಗೆ ತಮ್ಮ ಕೈಲಾದ ನೆರವು ನೀಡುವ ಮೂಲಕ ತಾಲ್ಲೂಕಿನ ಜನತೆಯ ಮನೆ ಮಗನಂತಿರುವ ವಿಜಯ್ ರಾಮೇಗೌಡ ರವರಿಗೆ ಮುಂದಿನ ದಿನಗಳಲ್ಲಿ ಆ ದೇವರು ತಾಲ್ಲೂಕಿನಲ್ಲಿ ಜನಪ್ರತಿನಿಧಿಯಾಗಿ ಸೇವೆ ಸಲ್ಲಿಸುವ ಅವಕಾಶ ಕಲ್ಪಿಸಲಿ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಪಿ.ಎಲ್.ಡಿ.ಬ್ಯಾಂಕ್ ನಿರ್ದೇಶಕ ಚಂದ್ರೇಗೌಡ, ಗ್ರಾ.ಪಂ.ಮಾಜಿ ಅಧ್ಯಕ್ಷ ವೆಂಕಟೇಶ್, ಗಂಗಣ್ಣ, ಜಗಣ್ಣ, ಸಾಗರ್, ಅನಿಲ್, ಪ್ರಭಾ, ಅಭಿ, ಹೆಮ್ಮನಹಳ್ಳಿ ಮಂಜೇಗೌಡ, ವಿಜಯ್ ರಾಮೇಗೌಡರ ಆಪ್ತ ಸಹಾಯಕ ಬಸವರಾಜ್, ಸೇರಿದಂತೆ ನೂರಾರು ಗ್ರಾಮಸ್ಥರು ಉಪಸ್ಥಿತರಿದ್ದರು