ನೌಕರರ ಸಂಘದ ಚುನಾವಣೆ ಪಾರದರ್ಶಕವಾಗಿ ನಡೆಸಲು ಜಿಲ್ಲಾಧಿಕಾರಿಗಳಿಗೆ ಮನವಿ
ಬೀದರ: ಸೆ.೨೪:ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಶಾಖೆ ಬೀದರನ ೨೦೨೪-೨೯ನೇ ಅವಧಿಯ ಚುನಾವಣೆ ಪ್ರಕ್ರಿಯೆಗಳನ್ನು ಪಾರದರ್ಶಕವಾಗಿ ನಡೆಯುವಂತೆ ಕ್ರಮ ಜರುಗಿಸುವ ಕುರಿತು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಹಾಗೂ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖಾ ನೌಕರರ ಕೇಂದ್ರ ಸಂಘದ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಲಾಯಿತು.
ಕರ್ನಾಟಕ ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖಾ ನೌಕರರ ಕೇಂದ್ರ ಸಂಘದ ಜಿಲ್ಲಾಧ್ಯಕ್ಷ ರಾಜಕುಮಾರ ಮಾಳಗಿ, ನಿಯಮದ ಪ್ರಕಾರ ಕರಡು ಮತದಾರರ ಪಟ್ಟಿಯನ್ನು ಜಿಲ್ಲಾ ಸಂಘದಿAದ ದಿನಾಂಕ: ೦೧-೦೭- ೨೦೨೪ ರಂದು ಪ್ರಕಟಿಸಬೇಕಾಗಿತ್ತು ಆದರೆ ಜಿಲ್ಲಾಧ್ಯಕ್ಷರು ಇಲ್ಲಿಯವರೆಗೆ ಪಟ್ಟಿ ನೀಡಿರುವುದಿಲ್ಲ,ಹಾಗಾಗಿ ಚುನಾವಣೆಯು ಪಾರದರ್ಶಕವಾಗಿ ನಡೆಯುವುದು ಸಂಶಯಾಸ್ಪವಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖಾ ನೌಕರರ ಕೇಂದ್ರ ಸಂಘದ ಪ್ರಧಾನ ಕಾರ್ಯದರ್ಶಿ ಸುನೀಲಕುಮಾರ ಕಸ್ತೂರ ಹಾಗೂ ಇತರರು ಉಪಸ್ಥಿತರಿದ್ದರು.