ಅಬ್ದುಲ್ ವಾಜೀದ್ ಜನ್ಮದಿನ ಮುಖಂಡರಿಂದ ಶುಭಾಶಯ
ಬೆಂಗಳೂರು,ಸೆ.೨೪- ಬೆಂಗಳೂರು ನಗರ ಉತ್ತರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಬ್ದುಲ್ ವಾಜೀದ್ ಜನ್ಮದಿನದ ಪ್ರಯುಕ್ತ, ಯಲಹಂಕ ಕಾಂಗ್ರೆಸ್ ಸಮಿತಿ ವತಿಯಿಂದ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಯಲಹಂಕ ಕ್ಷೇತ್ರದ ಹಲವು ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು, ಅವರನ್ನು ಅಭಿನಂದಿಸಿ, ಶುಭಕೋರಿದರು.
ಈ ವೇಳೆ ಮಾತನಾಡಿದ ಅವರು, ಯಲಹಂಕ ನನಗೆ ಹೊಸದಲ್ಲ೨೦೦೦ದಿಂದ ೨೦೧೦ರ ಅವಧಿಯಲ್ಲಿ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷನಾಗಿದ್ದಾಗ ಈ ಭಾಗದಲ್ಲಿ ಕಾರ್ಯನಿರ್ವಹಿಸಿದ್ದೇನೆ. ಅಂದು ನನ್ನೊಂದಿಗೆ ಒಡನಾಟದಲ್ಲಿದ್ದ ಹಲವು ಕಾರ್ಯಕರ್ತರು ಇಂದು ರಾಜಕೀಯದಲ್ಲಿ ಒಳ್ಳೆಯ ಸ್ಥಾನಗಳನ್ನು ಅಲಂಕರಿಸಿದ್ದಾರೆ ಎಂದು ತಿಳಿಸಿದರು.
ನಿಷ್ಠೆಯಿಂದ ದುಡಿಯುವ ಕಾರ್ಯಕರ್ತರಿಗೆ ಪಕ್ಷದಲ್ಲಿ ಮುಂದೆಯೂ ಒಳ್ಳೆಯ ಅವಕಾಶಗಳು ದೊರೆಯಲಿವೆ. ನಾವೆಲ್ಲರೂ ಒಗ್ಗಟ್ಟಾಗಿ ಪಕ್ಷದ ಬೆಳವಣಿಗೆಗೆ ಶ್ರಮಿಸುವ ಮೂಲಕ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತೆ ಗೆಲ್ಲಿಸಲು ಪಣ ತೊಡಬೇಕು ಎಂದರು.
ಕಾಂಗ್ರೆಸ್ ಮುಖಂಡರಾದ ಕೇಶವ. ರಾಜಣ್ಣ, ವೈ.ಆರ್.ಶ್ರೀಧರ್, ಎನ್.ಎನ್.ಶ್ರೀನಿವಾಸಯ್ಯ, ಎಂ.ಜಯಗೋಪಾಲಗೌಡ, ಎಚ್.ಎ. ಶಿವಕುಮಾರ್, ಕೆಪಿಸಿಸಿ ಸದಸ್ಯರಾದ ಎಸ್.ಬಿ.ಬಾಷಾ, ರಾಜಕುಮಾರ್, ಸಿ.ಶಶಿಕುಮಾರ್, ಕೆಪಿಸಿಸಿ ವಕ್ತಾರ ಮಂಜುನಾಥ್ ಅದ್ದೆ, ಯಲಹಂಕ ಗ್ರಾಮಾಂತರ ಬ್ಲಾಕ್ ಅಧ್ಯಕ್ಷ ಶ್ರೀನಿವಾಸ್, ಯಲಹಂಕ ನಗರ ಬ್ಲಾಕ್ ಅಧ್ಯಕ್ಷ ರವಿ, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷರಾದ ಎನ್.ಎಂ.ಶ್ರೀನಿವಾಸ್, ನಾಗರಾಜ್, ಜಿ.ಪಂ. ಮಾಜಿ ಸದಸ್ಯೆ ಲಾವಣ್ಯ ನರಸಿಂಹಮೂರ್ತಿ, ಬಿಬಿಎಂಪಿ ಮಾಜಿ ಸದಸ್ಯೆ ಪದ್ಮಾವತಿ ಅಮರನಾಥ್, ಯಲಹಂಕ ಬ್ಲಾಕ್ ಎಸ್ಸಿ ಘಟಕದ ಮಾಜಿ ಅಧ್ಯಕ್ಷ ಸುರೇಶ್ ಮೃತ್ಯುಂಜಯ ಮತ್ತಿತರರು ಉಪಸ್ಥಿತರಿದ್ದರು.
ಬೆಂಗಳೂರು ನಗರ ಉತ್ತರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಬ್ದುಲ್ ವಾಜೀದ್ ರವರು ಹುಟ್ಟುಹಬ್ಬ ಆಚರಿಸಿಕೊಂಡ ಸಂದರ್ಭದಲ್ಲಿ ಹಲವಾರು ಯುವ ಕಾಂಗ್ರೆಸ್ ಮುಖಂಡರು ಪುಷ್ಪಗುಚ್ಛ ನೀಡಿ ಶುಭಾಶಯ ಕೋರಿದರು.