ಕಬ್ಬೂರು ಪ್ರೌಢಶಾಲೆ ಪ್ರಾರಂಭೋತ್ಸವ: ಬಿಇಒ ಡಾ. ಪುಷ್ಪಲತಾ ಭೇಟಿ

ಸಂಜೆವಾಣಿ ವಾರ್ತೆ
ದಾವಣಗೆರೆ.ಜೂ.೧: ತಾಲ್ಲೂಕಿನ ಕಬ್ಬೂರು ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಶಾಲಾ ಪ್ರಾರಂಭೋತ್ಸವ ಹಾಗೂ ಎಸ್ಸೆಸ್ಸೆಲ್ಸಿ ಪರೀಕ್ಷೆ -2 ರ ಪರಿಹಾರ ಬೋಧನೆ ಸಂಬಂಧಪಟ್ಟಂತೆ ಮಕ್ಕಳೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ದಾವಣಗೆರೆ ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಪುಷ್ಪಲತಾ ಪಾಲ್ಗೊಂಡಿದ್ದರು.ಶಾಲಾ ಪ್ರಾರಂಭೋತ್ಸವ ನಿಮಿತ್ತ  ಶಾಲೆಗೆ ಆಗಮಿಸಿದ ಮಕ್ಕಳಿಗೆ ಪುಷ್ಪಲತಾ ಅವರು ಗುಲಾಬಿ ಹೂವು ಹಾಗೂ ಸಿಹಿ ನೀಡಿ ಸ್ವಾಗತಿಸಿದರು. ನಂತರ ಎಸ್ಸೆಸ್ಸೆಲ್ಸಿ ಪರೀಕ್ಷೆ-2 ಬರೆಯುವ ಮಕ್ಕಳೊಂದಿಗೆ ಸಂವಾದ ನಡೆಸಿ, ಅವರಲ್ಲಿ ಆತ್ಮಸ್ಥೈರ್ಯ ತುಂಬಿದರು. ನಂತರ ಶಿಕ್ಷಕರ ಸಭೆ ನಡೆಸಿ ಮಾರ್ಗದರ್ಶನ ನೀಡಿದರು.ಈ ಸಂದರ್ಭದಲ್ಲಿ ಟಿಪಿಇಒ ಲೋಕಣ್ಣ,  ಇಸಿಓ  ಚೇತನ ಹಾಗೂ ಸಿಆರ್ ಪಿ  ಉಷಾ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕ ಎಂ.ಎಸ್. ಸುನೀಲ್ ಕುಮಾರ್ ಹಾಗೂ ಶಿಕ್ಷಕ ವರ್ಗದವರು ಹಾಜರಿದ್ದರು.