ಉದ್ದಿಮೆದಾರದಿಂದ ವೈಭವೀಕರಣದ ಜಾಹೀರಾತು; ಮಾದಕ ವ್ಯಸನಿಗಳಾಗಿರುವ ಯುವಪೀಳಿಗೆ
ಸಂಜೆವಾಣಿ ವಾರ್ತೆ
ದಾವಣಗೆರೆ.ಜೂ.೧: ಇತ್ತೀಚಿನ ದಿನಗಳಲ್ಲಿ ಯುವಪೀಳಿಗೆಯಲ್ಲಿ ಮಾದಕ ವಸ್ತುಗಳ ವ್ಯಸನಿಗಳು ಹೆಚ್ಚಾಗುತ್ತಿದ್ದು, ಉದ್ದಿಮೆಗಳು ತಮ್ಮ ಉದ್ದಿಮೆಗಳನ್ನು ವೃದ್ದಿ ಮಾಡಿಕೊಳ್ಳಲು ಯುವಕ ಯುವತಿಯರನ್ನೇ ಗುರಿಯಾಗಿಸಿಕೊಂಡು ಮಾದಕ ವ್ಯಸನಿಗಳನ್ನಾಗಿ ಮಾಡುತ್ತಿದ್ದಾರೆ. ಆ ಮೂಲಕ ಸಮಾಜದ ಸ್ವಾಸ್ಥ್ಯ ಹಾಳು ಮಾಡುತ್ತಿದ್ದಾರೆ. ಈ ಬಗ್ಗೆ ಸರ್ಕಾರ, ಅಧಿಕಾರಿಗಳು ಮಾತ್ರವಲ್ಲದೆ ಸಾರ್ವಜನಿಕರು ಇದರ ನಿಯಂತ್ರಣಕ್ಕೆ ಬದ್ದತೆ ತೋರಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರಾಜೇಶ್ವರಿ ಎನ್.ಹೆಗಡೆ ಕರೆ ನೀಡಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ದಾವಣಗೆರೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಾನಗರ ಪಾಲಿಕೆ, ಚಿಗಟೇರಿ ಜಿಲ್ಲಾ ಆಸ್ಪತ್ರೆ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಛೇರಿ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಜಿಲ್ಲಾ ವಕೀಲರ ಸಂಘ, ಅಶ್ವಿನಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಪಿ.ಜಿ ಸೆಂಟರ್ ಹಾಗೂ ವಿ.ಎಸ್. ಪ್ಯಾರಾಮೆಡಿಕಲ್ ಕಾಲೇಜ್ ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ವಿಶ್ವ ತಂಬಾಕು ರಹಿತ ದಿನ ವೇದಿಕೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.