ಲೋಕಸಭಾ ಚುನಾವಣೆ ; ಮತ ಎಣಿಕೆಗೆ ಸಕಲ ಸಿದ್ಧತೆ : ಟಿ.ವೆಂಕಟೇಶ್

ಸಂಜೆವಾಣಿ ವಾರ್ತೆ
ಚಿತ್ರದುರ್ಗ. ಜೂ.೧: ಏಪ್ರಿಲ್ 26ರಂದು ನಡೆದ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣೆಯ ಮತಎಣಿಕೆಯು ಜೂನ್ 04ರಂದು ಬೆಳಿಗ್ಗೆ 7ರಿಂದ ನಗರದ ಬಿ.ಡಿ.ರಸ್ತೆಯ ಸರ್ಕಾರಿ ವಿಜ್ಞಾನ ಕಾಲೇಜಿನ ನೂತನ ಕಟ್ಟಡದಲ್ಲಿ ನಡೆಯಲಿದ್ದು, ಈ ಮತ ಎಣಿಕೆ ಕಾರ್ಯ ಸುಗಮವಾಗಿ ನಡೆಯಲು ಅಗತ್ಯ ಸಿದ್ದತೆಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ ಅವರು ಹೇಳಿದರು. ತಮ್ಮ ಕಚೇರಿ ಸಭಾಂಗಣದಲ್ಲಿ ಮತಎಣಿಕೆ ಸಿದ್ಧತೆಗಳ ಕುರಿತು ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿ ಮಾತನಾಡುತ್ತಿದ್ದರು. ಮತಗಟ್ಟೆಗಳನ್ನು ದಾಸ್ತಾನು ಮಾಡಿರುವ ಕಟ್ಟಡದ ಮೇಲುಸ್ತುವಾರಿಗಾಗಿ ಓರ್ವ ಪತ್ರಾಂಕಿತ ಹುದ್ದೆಯ ಅಧಿಕಾರಿಯನ್ನು ದಿನದ 24ಗಂಟೆಯ ಅವಧಿಗೆ ನಿಯೋಜಿಸಲಾಗಿದೆ ಅಲ್ಲದೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ತಾವೂ ಕೂಡ ಖುದ್ದಾಗಿ ಭೇಟಿ ನೀಡಿ ಭದ್ರತಾ ಕೊಠಡಿಗಳನ್ನು ಪರಿಶೀಲಿಸಲಾಗುತ್ತಿದೆ. ಅಲ್ಲದೇ ಉಮೇದುವಾರರಲ್ಲದೇ ರಾಜಕೀಯ ಪಕ್ಷಗಳ ಪ್ರತಿನಿಧಿಗಳೂ ಕೂಡ ಭದ್ರತಾ ಕೊಠಡಿಯನ್ನು ಭೇಟಿ ನೀಡಲು ಅವಕಾಶ ನೀಡಲಾಗಿತ್ತು ಎಂದರು.ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಸಂಬAಧಿಸಿದAತೆ ಪ್ರತ್ಯೇಕವಾಗಿ ಮತಎಣಿಕೆ ನಡೆಯಲಿದೆ. ಉಮೇದುವಾರರು ಮತಎಣಿಕೆ ಕಾರ್ಯಕ್ಕೆ ಸುಮಾರು 125ಮಂದಿ ಏಜೆಂಟರನ್ನು ನೇಮಿಸಿಕೊಳ್ಳಲು ಸೂಚಿಸಲಾಗಿದೆ. ಏಜೆಂಟರುಗಳು ಪೆನ್ನು ಮತ್ತು ಬಿಳಿ ಹಾಳೆಯ ಹೊರತಾಗಿ ಮೊಬೈಲ್ ಸೇರಿದಂತೆ ಬೇರೆ ಯಾವುದೇ ರೀತಿಯ ವಿದ್ಯುನ್ಮಾನ ಯಂತ್ರಗಳು, ನೀರಿನ ಬಾಟಲಿ, ಇನ್ನಿತರ ವಸ್ತುಗಳು, ಮುಂತಾದವು ಕೊಂಡೊಯ್ಯುವುದನ್ನು ನಿಷೇಧಿಸಲಾಗಿದೆ. ಏಜೆಂಟರು ತಮಗೆ ನಿಗಧಿಪಡಿಸಿದ ಟೇಬಲ್ ಮತ್ತು ಕ್ಷೇತ್ರಕ್ಕೆ ನಿಗಧಿಪಡಿಸಿರುವ ಕೌಂಟಿAಗ್ ಕೊಠಡಿಯನ್ನು ಬಿಟ್ಟು ಬೇರೆ ಕಡೆಗೆ ಹೋಗುವುದನ್ನು ನಿ಼ಷೇಧಿಸಲಾಗಿದೆ ಎಂದರು.ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 14ಟೇಬಲ್‌ಗಳನ್ನು ಹಾಗೂ ಅಂಚೆ ಮತಪತ್ರಗಳ ಎಣಿಕೆಗೆ ಒಟ್ಟು 12ಟೇಬಲ್‌ಗಳನ್ನು ನಿಗಧಿಪಡಿಸಲಾಗಿದೆ. ಅಂದು ಬೆಳಿಗ್ಗೆ 7.30ಕ್ಕೆ ಭದ್ರತಾ ಕೊಠಡಿಗಳನ್ನು ಏಕಕಾಲಕ್ಕೆ ತೆರೆದು ಬೆಳಿಗ್ಗೆ 8ರಿಂದ ಅಂಚೆ ಮತ ಎಣಿಕೆ ಮತ್ತು ವಿದ್ಯುನ್ಮಾನ ಮತಯಂತ್ರಗಳ ಎಣಿಕೆಯನ್ನು ಆರಂಭಿಸಲಾಗುವುದು. ನೆಲಮಹಡಿಯಲ್ಲಿ ಚಳ್ಳಕೆರೆ, ಹೊಸದುರ್ಗ ಮತ್ತು ಪಾವಗಡ ವಿಧಾನಸಭಾ ಕ್ಷೇತ್ರಗಳ ಎಣಿಕೆ, ಮೊದಲ ಮಹಡಿಯಲ್ಲಿ ಮೊಳಕಾಲ್ಮೂರು, ಹಿರಿಯೂರು ಮತ್ತು ಶಿರಾ ತಾಲೂಕುಗಳ ಮತಎಣಿಕೆ ಹಾಗೂ ಎರಡನೇ ಮಹಡಿಯಲ್ಲಿ ಚಿತ್ರದುರ್ಗ ಮತ್ತು ಹೊಳಲ್ಕೆರೆ ವಿಧಾನಸಭಾ ಕ್ಷೇತ್ರಗಳ ಮತಎಣಿಕೆ ಕಾರ್ಯ ನಡೆಯಲಿದೆ ಎಂದರು.