ಶಾಲಾ ಪ್ರಾರಂಭೋತ್ಸವಕ್ಕೆ ವಿಶಿಷ್ಟವಾಗಿ ಚಾಲನೆ
ಧಾರವಾಡ, ಜೂ 1: ಇಂದು ಪ್ರಸಕ್ತ ಸಾಲಿನ ಶಾಲಾ ಪ್ರಾರಂಭೋತ್ಸವ. ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ನಗರದ ಮಹಿಳಾ ಶಿಕ್ಷಣ ಮಹಾವಿದ್ಯಾಲಯದ ಸರಕಾರಿ ಉರ್ದು ಮತ್ತು ಕನ್ನಡ ಪ್ರಾಥಮಿಕ, ಪ್ರೌಢ ಶಾಲೆ ವಿದ್ಯಾರ್ಥಿಗಳಿಗೆ 8 ನೇ ತರಗತಿ ಇಂಗ್ಲೀಷ ಭಾಷಾ ವಿಷಯ ಪಾಠ ಬೋಧಿಸುವ ಮೂಲಕ ಶಾಲಾ ಪ್ರಾರಂಭೋತ್ಸವಕ್ಕೆ ವಿಶಿಷ್ಟವಾಗಿ ಚಾಲನೆ ನೀಡಿದರು.