ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡಲು ಅಲ್ಲಂ ಪ್ರಶಾಂತ್ ಮನವಿ
(ಸಂಜೆವಾಣಿ ವಾರ್ತೆ)
ಬಳ್ಳಾರಿ, ಮೇ.31:  ನಗರದ ಸರಳಾದೇವಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ  ಇಂದು ಬಳ್ಳಾರಿ ಜಿಲ್ಲಾ ನಗರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಅಲ್ಲಂ ಪ್ರಶಾಂತ್ ಅವರ ನೇತೃತ್ವದಲ್ಲಿ.   ಈಶಾನ್ಯ ಪದವೀಧರರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಾ.ಚಂದ್ರಶೇಖರ್ ಪಾಟೀಲ್ ಅವರಿಗೆ ಮತ ನೀಡುವಂತೆ ಉಪನ್ಯಾಸಕರಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಪ್ರಶಾಂತ್ ಅವರು ಕಳೆದ ಬಾರಿಯೂ ನಮ್ಮ ಅಭ್ಯರ್ಥಿಗೆ ಈ ಭಾಗದ ಜನತೆ ಹೆಚ್ಚಿನ ಮತ ನೀಡಿ ಬೆಂಬಲಿಸಿದ್ದರು. ಅವರು ಶಿಕ್ಷಕರ, ಉಪನ್ಯಾಸಕ, ನಿರುದ್ಯೋಗಿಗಳ ಸಮಸ್ಯೆಗಳ ಬಗ್ಗೆ ಸದನದ ಗಮನ ಸೆಳೆದಿದ್ದಾರೆ. ಶಿಕ್ಷಕರ ನೇಮಕಕ್ಕೆ ಒತ್ತಾಯ ಮಾಡಿ ನೇಮಕಾತಿ ಪ್ರಕ್ರಿಯೆಗೆ ಕಾರಣರಾಗಿದ್ದಾರೆ.
ಒಟ್ಟಾರೆ ಶಿಕ್ಷಣ ಸಂಸ್ಥೆಗಳನ್ನು ಹೊಂದಿರುವ ಅವರು ಶಿಕ್ಷಣದ ಸಮಸ್ಯೆಗಳ ಬಗ್ಗೆ ಅರಿತು ಆಗಿಂದಾಗ್ಗೆ ಅಂತಹ ಸಮಸ್ಯೆಗಳ ಪರಿಹಾರಕ್ಕೆ ಧ್ವನಿಯಾಗಲಿದ್ದಾರೆ. ಅದಕ್ಕಾಗಿ ಅವರಿಗೆ  ಮೊದಲ ಪ್ರಾಶಸ್ತ್ಯ ಮತವನ್ನು ನಮ್ಮ ಕಾಂಗ್ರೆಸ್ ಅಭ್ಯರ್ಥಿಗೆ ನೀಡುವಂತೆ ಕೋರಿದರು.
ಈ ವೇಳೆ ಬುಡಾ ಅಧ್ಯಕ್ಷ ಜೆ.ಎಅ್.ಅಂಜನೇಯಲು,  ಮುಖಂಡರಾದ ಸತೀಶ್ ಕಾಂಡ್ರ ಅವರ ಭಾಗಿಯಾಗಿದ್ದರು.