ಮಹಿಳಾ ಆಯೋಗಕ್ಕೆ ವಿದ್ಯಾರ್ಥಿನಿ ಪತ್ರ: ಸೂಕ್ತ ತನಿಖೆಗೆ ಎಐಡಿಎಸ್‍ಓ ಆಗ್ರಹ
ಕಲಬುರಗಿ,ಮೇ.31-ಕಡಗಂಚಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬಳು, ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಪೆÇ್ರಫೆಸರ್ ವಿಜಯಕುಮಾರ್ ಅವರು ಮಾನಸಿಕ ಕಿರುಕುಳ ನೀಡಿದ್ದಾರೆ ಎಂಬ ಗಂಭೀರ ಆರೋಪ ಮಾಡಿರುವ ಕುರಿತು ಮಹಿಳಾ ಆಯೋಗಕ್ಕೆ ಪತ್ರ ಬರೆದಿರೆದಿರುವದು ಬೆಳಕಿಗೆ ಬಂದಿದ್ದು, ಈ ಕುರಿತು ಸೂಕ್ತ ತನಿಖೆ ನಡೆಸಬೇಕು ಎಂದು ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್(ಎಐಡಿಎಸ್‍ಓ) ಜಿಲ್ಲಾ ಕಾರ್ಯದರ್ಶಿ ತುಳಜರಾಮ ಎನ್.ಕೆ. ಆಗ್ರಹಿಸಿದ್ದಾರೆ.
ಬೇರೆ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದ ಉನ್ನತ ಶಿಕ್ಷಣಕ್ಕಾಗಿ ಪೆÇೀಷಕರು ತಮ್ಮ ಮಕ್ಕಳನ್ನು ಇಲ್ಲಿಯ ಕೇಂದ್ರೀಯ ವಿಶ್ವವಿದ್ಯಾಲಯಕ್ಕೆ ಕಳುಹಿಸುತ್ತಾರೆ. ವಿದ್ಯಾರ್ಥಿಗಳಲ್ಲಿ ಆಳವಾದಂತಹ ಜ್ಞಾನವನ್ನು ತುಂಬುವಂತಹ ವಿಶ್ವವಿದ್ಯಾಲಯಗಳಲ್ಲಿ ಇಂತಹ ಘಟನೆಗಳು ನಡೆಯುತ್ತಿರುವುದು ಅತ್ಯಂತ ಆಘಾತಕಾರಿಯಾಗಿದೆ. ಇಂತಹ ಘಟನೆಗಳಿಂದಾಗಿ ಹೆಣ್ಣು ಮಕ್ಕಳು ಉನ್ನತ ಶಿಕ್ಷಣಗಳಿಂದ ದೂರ ಉಳಿಯುವಂತಾಗುತ್ತಿದೆ.
ಸಿಯುಕೆಯಲ್ಲಿ ವಿದ್ಯಾರ್ಥಿನಿಯ ಮೇಲೆ ನಡೆದ ಕಿರುಕುಳಗಳ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ, ಕೂಡಲೇ ಸೂಕ್ತವಾದಂತಹ ತನಿಖೆಯನ್ನು ನಡೆಸಬೇಕು ತಪ್ಪಿಸ್ಥರಿಗೆ ನಿದರ್ಶನೀಯವಾದಂತಹ ಶಿಕ್ಷೆಯನ್ನು ನೀಡಬೇಕು. ಹಾಗೂ ವಿಶ್ವವಿದ್ಯಾಲಯಗಳಲ್ಲಿ ಓದಲು ಬರುವಂತಹ ವಿದ್ಯಾರ್ಥಿನಿಯರಿಗೆ ಸೂಕ್ತವಾದಂತಹ ಭದ್ರತೆಯನ್ನು ಒದಗಿಸಬೇಕೆಂದು ಅವರು ಆಗ್ರಹಿಸಿದ್ದಾರೆ.