ಕಾಂಗ್ರೆಸ್ ಅಭ್ಯರ್ಥಿ  ಪರ ವಿವಿಧ ಕಾಲೇಜುಗಳಲ್ಲಿ ಮತಯಾಚನೆ

ಸಂಜೆವಾಣಿ ವಾರ್ತೆ
ದಾವಣಗೆರೆ.ಮೇ.೩೧: ಬರುವ ಜೂನ್ ಮೂರರಂದು ನಡೆಯುವ ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಡಿ.ಟಿ. ಶ್ರೀನಿವಾಸ್ ಪರವಾಗಿ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಪಕ್ಷದ ವತಿಯಿಂದ ದಾವಣಗೆರೆ ನಗರದ ವಿವಿಧ ಕಾಲೇಜುಗಳಲ್ಲಿ ಮತಯಾಚಿಸಲಾಯಿತು.ಇಂದು ಬೆಳಗ್ಗೆ ದಾವಣಗೆರೆ ನಗರದ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜ್ ಮೋತಿ ವೀರಪ್ಪ ಪದವಿಪೂರ್ವ ಕಾಲೇಜ್, ಸೆಂಟ್ ಫಾಲ್ಸ್ ಕಾನ್ವೆಂಟ್, ಜೈನ್ ಸ್ಕೂಲ್ ಮತ್ತು ಸೀತಮ್ಮ ಕಾಲೇಜುಗಳಲ್ಲಿ ಮತಯಾಚನೆ ಮಾಡಲಾಯಿತು.ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ ಗೆಲ್ಲಲು ಶಿಕ್ಷಕರೊಂದಿಗೆ ಸಭೆ ನಡೆಸಿ ಶಿಕ್ಷಕರ ಸಮಸ್ಯೆಗಳನ್ನು ಪರಿಹರಿಸಲು ಮತ್ತು ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸುವ ಪ್ರಯತ್ನ ಮಾಡಬೇಕು, ಪಕ್ಷದ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಅವರೊಂದಿಗೆ ಸಮನ್ವಯ ಸಾಧಿಸಿ ೆ್ಕ÷್ಷÃತ್ರ ವ್ಯಾಪ್ತಿಯ ಜಿಲ್ಲೆಗಳ ಮತದಾರರನ್ನು ತಲುಪುವ ಉದ್ದೇಶದಿಂದ ಪ್ರತಿಯೊಂದು ಅರ್ಹ ಶಾಲಾ-ಕಾಲೇಜುಗಳಿಗೆ ಭೇಟಿ ಮತಯಾಚಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಮಾಜಿ ಶಾಸಕಿ ಪೂರ್ಣೀಮಾ ಶ್ರೀನಿವಾಸ ಅವರ ಸಹೋದರಿ ಅನುಪಮ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕರ‍್ಯದರ್ಶಿ ದಿನೇಶ್ ಕೆ.ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಜಿ.ಶಿವಕುಮಾರ್, ಮಹಾನಗರ ಪಾಲಿಕೆ ಸದಸ್ಯ ಎ.ನಾಗರಾಜ್, ಮಾಜಿ ಸದಸ್ಯ ಡಿ.ಎನ್. ಜಗದೀಶ್, ಪ್ರಾಂಶುಪಾಲ ಪ್ರದೀಪ್ ಮತ್ತಿತರರಿದ್ದರು.