ಶಾಸಕ ಕೆ.ಎಸ್.ಬಸವಂತಪ್ಪ ಅಧಿಕಾರಿಗಳಿಗೆ ತರಾಟೆ

ಸಂಜೆವಾಣಿ ವಾರ್ತೆ
ದಾವಣಗೆರೆ.ಮೇ.೩೧; ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯ ದಿಂಡದಹಳ್ಳಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಿ ಮೂರು ತಿಂಗಳು ಕಳೆದರೂ ಗ್ರಾಮಸ್ಥರಿಗೆ ಒಂದು ಹನಿ ನೀರು ವಿತರಿಸಿಲ್ಲ ಎಂದು ಶಾಸಕ ಕೆ.ಎಸ್.ಬಸವಂತಪ್ಪ ಗುತ್ತಿಗೆದಾರರು ಮತ್ತು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.ತಾಲೂಕಿನ ದಿಂಡದಹಳ್ಳಿ ಗ್ರಾಮಕ್ಕೆ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಿ ಮೂರು ತಿಂಗಳು ಕಳೆದರೂ ಒಂದನಿ ನೀರು ವಿತರಿಸಿಲ್ಲ. ಶುದ್ಧ ನೀರು ಸಿಗದೆ ಗ್ರಾಮಸ್ಥರು ವಿವಿಧ ರೋಗಗಳಿಗೆ ತುತ್ತಾಗಬೇಕಾಗಿದೆ ಎಂದು ಗ್ರಾಮಸ್ಥರು ಶಾಸಕರ ಬಳಿ ಅಳಲು ತೋಡಿಕೊಂಡರು.ಸಂಬAಧಪಟ್ಟ ಅಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆಗೆ ಈಗಾಗಲೇ ಅನುದಾನ ಬಿಡುಗಡೆಯಾಗಿದೆ. ಆದರೂ ಕೂಡ ಗ್ರಾಮಸ್ಥರಿಗೆ ನೀರು ವಿತರಿಸಲು ಆಗಿಲ್ಲ. ಇದೇ ರೀತಿ ಕ್ಷೇತ್ರದ ವ್ಯಾಪ್ತಿಯಲ್ಲಿ ಇಂತಹ ಅನೇಕ ಘಟಕಗಳು ನಿರ್ವಹಣೆ ಇಲ್ಲದೆ ಸ್ಥಗಿತಗೊಂಡಿರುವ ಬಗ್ಗೆ ಜನರಿಂದ ದೂರುಗಳು ಬರುತ್ತಿವೆ. ಕೂಡಲೇ ಗ್ರಾಮೀಣ ಜನರಿಗೆ ಶುದ್ಧ ಕುಡಿಯುವ ನೀರು ವಿತರಿಸಲು ಕ್ರಮ ತೆಗೆದುಕೊಳ್ಳಬೇಕೆಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.