ಕಾಂಗ್ರೆಸ್ ಅಭ್ಯರ್ಥಿ ಪರ ಕೈ ನಾಯಕರ ಪ್ರತಿಭಟನೆ
ಸಂಜೆವಾಣಿ ನ್ಯೂಸ್
ಮೈಸೂರು.ಮೇ.31:- ಶಿಕ್ಷಕರ ಕ್ಷೇತ್ರದ ಚುನಾವಣೆಯ ನಿಮಿತ್ತ ಇಂದು ಮೈಸೂರಿನ ವಿಜಯ ವಿಠಲ ಹಾಗೂ ರೋಟರಿ ಶಾಲೆಯಲ್ಲಿ ಮತಯಾಚನೆ ಮಾಡಲಾಯಿತು.
ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮರಿತಿಬ್ಬೇಗೌಡ ಅವರಿಗೆ ಮೊದಲನೆಯ ಪ್ರಾಶಸ್ತ್ಯದ ಮತವನ್ನು ನೀಡಬೇಕೆಂದು ಮನವಿ ಮಾಡಲಾಯಿತು. ಈ ಸಂದರ್ಭದಲ್ಲಿ ಶಾಸಕ ಹರೀಶ್ ಗೌಡ, ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಂ.ಲಕ್ಷ್ಮಣ್ ಹಾಗೂ ಮೈಸೂರು ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಆರ್.ಮೂರ್ತಿ, ನಗರ ಪ್ರಧಾನ ಕಾರ್ಯದರ್ಶಿ ಎಂ.ಶಿವಣ್ಣ, ಭಾಸ್ಕರ್ ಎಲ್ ಗೌಡ, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಬಿ.ಎಂ. ರಾಮು, ಮಾಜಿ ಮೇಯರ್ ಗಳಾದ ಮೋದಮಣಿ, ಬಿ.ಕೆ.ಪ್ರಕಾಶ್, ಚಾಮರಾಜ ಕ್ಷೇತ್ರದ ಬ್ಲಾಕ್ ಅಧ್ಯಕ್ಷ ರವಿ, ರಾಯಪ್ಪ, ಮೈಸೂರು ಜಿಲ್ಲಾ ಗ್ರಾಮಂತರ ಕಾಂಗ್ರೆಸ್ ಸಮಿತಿ ವಕ್ತಾರ ಕೆ.ಮಹೇಶ್ ಇನ್ನು ಮುಂತಾದವರು ಉಪಸ್ಥಿತರಿದ್ದರು.