ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಉಪ ಕಾರ್ಯದರ್ಶಿಗಳಾಗಿ ನ್ಯಾ. ಎಂ. ಶ್ರೀಧರ ನೇಮಕ
ಸಂಜೆವಾಣಿ ವಾರ್ತೆ
ಚಾಮರಾಜನಗರ, ಮೇ.31- ಚಾಮರಾಜನಗರಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ. ಶ್ರೀಧರ ಅವರು ವರ್ಗಾವಣೆಗೊಂಡು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಉಪ ಕಾರ್ಯದರ್ಶಿ ಹುದ್ದೆಗೆ ನೇಮಕಗೊಂಡಿದ್ದು, ಪ್ರಸ್ತುತಚಾಮರಾಜನಗರಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾಗಿ ಹಿರಿಯ ಸಿವಿಲ್ ನ್ಯಾಯಾಧೀಶರಾದಈಶ್ವರ್‍ಅವರು ವರದಿ ಮಾಡಿಕೊಂಡಿದ್ದಾರೆ.
ಕಳೆದ ಮೂರು ವರ್ಷಗಳಿಂದ ಹಿರಿಯ ಸಿವಿಲ್ ನ್ಯಾಯಾಧೀಶರಾಗಿದ್ದ ಎಂ. ಶ್ರೀಧರ ಅವರುಜಿಲ್ಲಾ, ತಾಲೂಕು ಹಾಗೂ ಗ್ರಾಮೀಣ ಭಾಗದಲ್ಲಿ ಸಾರ್ವಜನಿಕರಿಗೆಉಚಿತ ಮತ್ತುತ್ವರಿತವಾಗಿ ಕಾನೂನು ನೆರವನ್ನುತಲುಪಿಸುವ ನಿಟ್ಟಿನಲ್ಲಿ ಪ್ರಾಧಿಕಾರದ ಕಾರ್ಯಚಟುವಟಿಕೆಗಳ ಮೂಲಕ ಸಕ್ರಿಯರಾಗಿಕರ್ತವ್ಯ ನಿರ್ವಹಿಸಿದ್ದರು. ಪ್ರಸ್ತುತ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಉಪ ಕಾರ್ಯದರ್ಶಿ ಹುದ್ದೆಗೆ ಎಂ. ಶ್ರೀಧರ ಅವರು ನೇಮಕಗೊಂಡಿದ್ದಾರೆಎಂದು ಪ್ರಕಟಣೆ ತಿಳಿಸಿದೆ.