ಈಶಾನ್ಯ ಪದವೀಧರ ಕ್ಷೇತ್ರ ಚುನಾವಣೆ,ಸಹಾಯವಾಣಿ ಕೇಂದ್ರ ಸ್ಥಾಪನೆ
ಕಲಬುರಗಿ:ಮೇ.30: ಈಶಾನ್ಯ ಕರ್ನಾಟಕ ಪದವೀಧರ ಚುನಾವಣೆ ಹಿನ್ನೆಲೆಯಲ್ಲಿ ಕಲಬುರಗಿ ನಗರ ವ್ಯಾಪ್ತಿಯಲ್ಲಿ ಬರುವಂತಹ ಮತದಾರರಿಗೆ ಮತಗಟ್ಟೆ ಸಂಖ್ಯೆ, ಕ್ರಮ ಸಂಖ್ಯೆ ಹಾಗೂ ಇನ್ನಿತರೆ ವಿಷಯಗಳ ಮಾಹಿತಿಯನ್ನು ಪಡೆಯಲು ಕಲಬುರಗಿ ಮಹಾನಗರ ಪಾಲಿಕೆಯ ಕೋಣೆ ಸಂಖ್ಯೆ-27 ರಲ್ಲಿ ಮತದಾರರ ಸಹಾಯವಾಣಿ ಕೇಂದ್ರ (Voter facilitation centre) ತೆಗೆಯಲಾಗಿದೆ ಎಂದು ಪಾಲಿಕೆ ಆಯುಕ್ತ ಮತ್ತು ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಭುವನೇಶ ಪಾಟೀಲ ದೇವಿದಾಸ್ ತಿಳಿಸಿದ್ದಾರೆ.
ಸಹಾಯವಾಣಿ ಸಂಖ್ಯೆ 08472-241364 ಗೆ ಕರೆ ಮಾಡಿ ಮತದಾರರು ಮಾಹಿತಿ ಪಡೆಯಬಹುದಾಗಿದೆ.