ಗ್ರಾ.ಪಂ.ಗಳಿಗೆ ಮುಷ್ಕರದ ಬಿಸಿ
ಲಕ್ಷ್ಮೇಶ್ವರ, ಅ5: ರಾಜ್ಯಾದ್ಯಂತ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಇಲಾಖೆ ಗ್ರಾಮ ಪಂಚಾಯಿತಿಗಳು ಶುಕ್ರವಾರದಿಂದ ಆರಂಭಿಸಿದ ಅನಿರ್ದಿಷ್ಟಾವಧಿ ಮುಷ್ಕರ ದ ಬಿಸಿ ಗ್ರಾಮ ಪಂಚಾಯಿತಿಗಳಿಗೆ ತಟ್ಟಿದೆ.
ತಾಲೂಕಿನ 14 ಗ್ರಾಮ ಪಂಚಾಯಿತಿಗಳ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಕರ ವಸುಲಿಗಾರರು ಡಾಟಾ ಎಂಟ್ರಿ ಆಪರೇಟರ್ಗಳು ಸ್ವಚ್ಛತಾ ಕಾರ್ಮಿಕರು ಕಾರ್ಯದರ್ಶಿಗಳು ನೀರು ಗಂಟಿಗಳು ಸೇರಿದಂತೆ ಪಂಚಾಯಿತಿಯ ಎಲ್ಲ ಸಿಬ್ಬಂದಿಗಳು ಬೆಂಗಳೂರಿನ ಫ್ರೀಡಂ ಪಾರ್ಕಿನ ಮುಷ್ಕರದಲ್ಲಿ ಪಾಲ್ಗೊಂಡಿರುವುದರಿಂದ ಸ್ಥಳೀಯವಾಗಿ ಎಲ್ಲಾ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಗ್ರಾಮಗಳಲ್ಲಿ ಜನಸಾಮಾನ್ಯರು ನಿನ್ನೆಯಿಂದ ತಮ್ಮ ಕೆಲಸ ಕಾರ್ಯಗಳಿಗಾಗಿ ಗ್ರಾಮ ಪಂಚಾಯಿತಿಗಳಿಗೆ ಬರುತ್ತಿದ್ದಂತೆಯೇ ಗ್ರಾಮ ಪಂಚಾಯಿತಿಗಳಿಗೆ ಬೀಗ ಜಡಿದಿರುವುದನ್ನು ಕಂಡು ವಾಪಸ್ ಆಗುತ್ತಿದ್ದಾರೆ.
ತಾಲೂಕಿನ 14 ಗ್ರಾಮ ಪಂಚಾಯಿತಿಗಳ ಬಹುತೇಕ ಸಿಬ್ಬಂದಿಗಳು ಮುಷ್ಕರದಲ್ಲಿ ಪಾಲ್ಗೊಂಡಿರುವುದರಿಂದ ಎಲ್ಲಾ ಗ್ರಾಮ ಪಂಚಾಯಿತಿಗೆ ಬೀಗ ಜಡಿದ ದೃಶ್ಯ ಸಾಮಾನ್ಯವಾಗಿದೆ.
ಕಳೆದ ಒಂದು ವಾರದಿಂದ ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳು ತಮ್ಮ ಬೇಡಿಕೆಗಳಿಗಾಗಿ ಆ ನಿರ್ದಿಷ್ಟ ಅವಧಿ ಮುಷ್ಕರ ಆರಂಭಿಸಿದ್ದರಿಂದ ಜನಸಾಮಾನ್ಯರು ತಹಶೀಲ್ದಾರ್ ಕಚೇರಿಗಳಿಗೆ ಗ್ರಾಮ ಆಡಳಿತ ಅಧಿಕಾರಿಗಳ ಕಚೇರಿಗೆ ಎಡತಾಕಿ ಸುಸ್ತಾಗಿದ್ದರು ಮತ್ತೆ ಕಂದಾಯ ಇಲಾಖೆ ಆಡಳಿತಾಧಿಕಾರಿಗಳು ಶುಕ್ರವಾರದಿಂದ ತಮ್ಮ ಕೆಲಸ ಕಾರ್ಯಗಳಿಗೆ ಹಾಜರಾಗುತ್ತಿದ್ದ ಬೆನ್ನಲ್ಲಿಯೇ ಈಗ ಗ್ರಾಮ ಪಂಚಾಯತಿ ಸಿಬ್ಬಂದಿ ಮುಷ್ಕರದಲ್ಲಿ ಪಾಲ್ಗೊಂಡಿರುವುದು ಜನಸಾಮಾನ್ಯರನ್ನು ಸಂಕಷ್ಟಕ್ಕಿಡು ಮಾಡಿದೆ.