ಸ್ವಚ್ಛತಾ ಹಿ ಸೇವಾ ಕಾರ್ಯಕ್ರಮ
ಗದಗ,ಅ5: ಪ್ರತಿಯೊಬ್ಬರು ಸುತ್ತಮುತ್ತಲಿನ ಪರಿಸರ ಸ್ವಚ್ಚತೆ ಬಗ್ಗೆ ಜಾಗೃತಿ ಹೊಂದುವುದು ಅವಶ್ಯಕ ಎಂದು ಪ್ರಧಾನಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಸವರಾಜ ಅವರು ಹೇಳಿದರು.
ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಂಗ, ಜಿಲ್ಲಾ ವಕೀಲರ ಸಂಘ, ಹಾಗೂ ನಗರಸಭೆ ಗದಗ-ಬೆಟಗೇರಿ ಇವರ ಸಂಯುಕ್ತಾಶ್ರಯದಲ್ಲಿ ಸ್ವಚ್ಛತಾ ಹಿ ಸೇವಾ – 2024ರ ಸ್ವಭಾವಸ್ವಚ್ಛತಾ-ಸಂಸ್ಕಾರ ಸ್ವಚ್ಛತಾ ಅಭಿಯಾನದಡಿಯಲ್ಲಿ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಂ.ಐ.ಹಿರೇಮನಿ ಪಾಟೀಲ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರಾಜೇಶ್ವರ ಎಸ್. ಶೆಟ್ಟಿ, ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶರಾದ ಕಾಶೀಮ ಚೂರಿಖಾನ, 1ನೇ ಹೆಚ್ಚುವರಿ ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶರಾದ ಖಾದರಸಾಬ ಎಚ್ ಬೆನಕಟ್ಟಿ, ಹಿರಿಯ ದಿವಾಣಿ ನ್ಯಾಯಾಧೀಶರಾದ ಸಿ.ಎಸ್. ಶಿವನಗೌಡ್ರ, ಪ್ರಧಾನ ಹಿರಿಯ ದಿವಾಣಿನ್ಯಾಯಾಧೀಶರು ಸಿಜೆಎಂ ಜಿ. ಆರ್. ಶೆಟ್ಟರ, ಅಪರ ಹಿರಿಯ ದಿವಾಣಿನ್ಯಾಯಾಧೀಶರಾದ ಪದ್ಮಶ್ರೀ.ಆರ್.ಪಾಟೀಲ, ಜೆಎಂಎಫ್‍ಸಿ 1ನೇ ನ್ಯಾಯಾಲಯದ ದಿವಾಣಿ ನ್ಯಾಯಾಧೀಶರಾದ ದೀಪ್ತಿ ನಾಡಗೌಡ, ಜೆಎಂಎಫ್‍ಸಿ 2ನೇ ನ್ಯಾಯಾಲಯದ ದಿವಾಣಿ ನ್ಯಾಯಾಧೀಶರಾದ ಬೀರಪ್ಪ ಕಾಂಬಳೆ,ಗದಗ ಬೆಟಗೇರಿ ನಗರಸಭೆ ಪೌರಾಯುಕ್ತÀ ಮಹೇಶ ಪೆÇೀತದಾರ,ಜಿಲ್ಲಾ ವಕೀಲರ ಸಂಘದ ಕಾರ್ಯದರ್ಶಿ ಬಿ.ಎಚ್.ಮಾಡಲಗೇರಿ, ವಕೀಲರ ಸಂಘದ ಉಪಾಧ್ಯಕ್ಷÀ ಅಶೋಕ ಹದ್ಲಿ, ಪರಿಸರ ಅಭಿಯಂತರ ಆನಂದ ಬದಿ, ಆರೋಗ್ಯ ನಿರೀಕ್ಷಕ ಎಂ.ಎಂ.ಮಕಾನದಾರ ಸೇರಿದಂತೆ ಪೌರಕಾರ್ಮಿಕರು, ವಕೀಲ ವೃಂದದವರು ಹಾಗೂ ನ್ಯಾಯಾಲಯ ಸಿಬ್ಬಂದಿ ಹಾಜರಿದ್ದರು.