ಮಾರಣಾಂತಿಕ ಹಲ್ಲೆ: ಆರೋಪಿಗಳ ಗಡಿಪಾರಿಗೆ ಆಗ್ರಹಿಸಿ ಪ್ರತಿಭಟನೆ
ಕಲಬುರಗಿ,ಮೇ.29-ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಹವಳಗಾ ಗ್ರಾಮದ ಪರಿಶಿಷ್ಟ ಜಾತಿಯ ಸುಧೀರ ನಾಗಪ್ಪ ಹೋಳಿಕೇರಿ ಅವರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಆರೋಪಿಗಳನ್ನು ಬಂಧಿಸಿ ಗಡಿಪಾರು ಮಾಡುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ನಗರದ ಪೊಲೀಸ್ ಭವನದ ಮುಂದೆ ಇಂದು ಪ್ರತಿಭಟನೆ ನಡೆಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿಪತ್ರ ಸಲ್ಲಿಸಲಾಯಿತು.
ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಡಾ.ಮಲ್ಲೇಶ್ ಸಜ್ಜನ್, ಜಿಲ್ಲಾ ಸಂಚಾಲಕ ಸತೀಶ್ ಮೆಂಗನ್, ಜಿಲ್ಲಾ ಸಂಘಟನಾ ಸಂಚಾಲಕರಾದ ಭೀಮಶಾ ಖನ್ನಾ, ಶಿವಪುತ್ರ ಹಾಗರಗಿ, ಶಿವಕುಮಾರ ಅಜಾದಪೂರ, ಮೈತ್ರಿ ಫೌಂಡೇಶನ್ ಅಧ್ಯಕ್ಷ ಪ್ರಕಾಶ ಅವರಾದಕರ, ಅಫಜಲಪುರ ತಾಲ್ಲೂಕ ಸಂಚಾಲಕ ಮಲ್ಲಿಕಾರ್ಜುನ ಬಿಲ್ಲಾಡ (ಕೆ), ಮುಖಂಡರಾದ ಮಡಿವಾಳಪ್ಪ ಮಲ್ಲಾಬಾದ, ಅರುಣ ಇನಾಮದಾರ, ಗೌತಮ ಉಪಾಧ್ಯಾಯ, ದಲಿತ ಕಲಾ ಮಂಡಳಿ ಜಿಲ್ಲಾ ಸಂಚಾಲಕ ಭಾಗಣ್ಣ ಕಟ್ಟಿ ಸೇರಿದಂತೆ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.