ಕಾಂಗ್ರೆಸ್ ಕಚೇರಿಯಲ್ಲಿ ನೆಹರೂ ಪುಣ್ಯತಿಥಿ ಆಚರಣೆ
ಬೀದರ್:ಮೇ.29: ಇಲ್ಲಿಯ ಶಿವನಗರದಲ್ಲಿ ಇರುವ ಕಾಂಗ್ರೆಸ್ ಜಿಲ್ಲಾ ಘಟಕದ ಕಚೇರಿಯಲ್ಲಿ ಸೋಮವಾರ ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಪುಣ್ಯ ತಿಥಿ ಆಚರಿಸಲಾಯಿತು.
ನೆಹರೂ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಮಾರ್ಲಾಪಣೆ ಮಾಡಿ ಗೌರವಿಸಲಾಯಿತು.
ನೆಹರೂ ಅವರು ದೇಶದ ಮೊದಲ ಪ್ರಧಾನಿಯಾಗಿದ್ದರು. ದೇಶಕ್ಕೆ ಅವರ ಕೊಡುಗೆ ಅಪಾರವಾಗಿದೆ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಹೇಳಿದರು.
ಮಾಜಿ ಸಂಸದ ನರಸಿಂಗರಾವ್ ಸೂರ್ಯವಂಶಿ, ಕೆಪಿಸಿಸಿ ಉಪಾಧ್ಯಕ್ಷ ಜಾನ್ ವೆಸ್ಲಿ, ಕಾಂಗ್ರೆಸ್ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ದತ್ತಾತ್ರಿ ಮೂಲಗೆ, ಮುಖಂಡರಾದ ಶಂಕರ ರೆಡ್ಡಿ, ಸಂಜುಕುಮಾರ ಡಿ.ಕೆ, ವಿಶಾಲ್ ದೊಡ್ಡಿ, ರಾಕೇಶ ಕುರುಬಖೇಳಗಿ, ನಾಗನಾಥ ಪಾಟೀಲ, ನಿಸಾರ್ ಅಹಮ್ಮದ್, ಪರ್ವೇಜ್ ಕಮಲ್ ಮತ್ತಿತರರು ಪಾಲ್ಗೊಂಡಿದ್ದರು.