ನಂಜುಂಡೇಶ್ವರನಿಗೆ ನಟಿ ಶಿಲ್ಪಾ ಪೂಜೆ
ಮೈಸೂರು,ಮೇ೨೯- ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರು ನಂಜನಗೂಡಿನ ನಂಜುಂಡೇಶ್ವರ ದೇಗುಲಕ್ಕೆ ಭೇಟಿ ನೀಡಿ ದರ್ಶನ ಪಡೆದಿದ್ದಾರೆ. ದೇವಸ್ಥಾನದ ಆವರಣದಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ಕಳೆದ ನಟಿ ಕೆಲಕಾಲ ದೇವರ ಕುರಿತು ಧ್ಯಾನ ಸಹ ಮಾಡಿದ್ದಾರೆ.
ಶಿಲ್ಪಾ ಶೆಟ್ಟಿ ದೇವಸ್ಥಾನಕ್ಕೆ ಭೇಟಿ ನೀಡಿದ ಸುದ್ದಿ ತಿಳಿದ ಅಭಿಮಾನಿಗಳು ಸೆಲ್ಫಿ ತೆಗೆದುಕೊಳ್ಳಲು ಮುಂದಾಗಿದ್ದಾರೆ ಆದರೆ ಭದ್ರತಾ ಸಿಬ್ಬಂದಿ ಅದಕ್ಕೆ ಅವಕಾಶ ನೀಡಲಿಲ್ಲ. ದೇವಸ್ಥಾನದಿಂದ ಹೊರಡುವ ಮುನ್ನ ನಟಿ ಪೊಲೀಸರೊಂದಿಗೆ ಫೋಟೋ ತೆಗೆಸಿಕೊಂಡಿದ್ದಾರೆ.
ಏಪ್ರಿಲ್ ಅಂತ್ಯದಲ್ಲಿ ಶಿಲ್ಪಾ ಶೆಟ್ಟಿ ಮಂಗಳೂರಿಗೆ ಬಂದಿದ್ದರು. ಆ ಸಂದರ್ಭದಲ್ಲಿ ಶಿಬರೂರಿನ ಶ್ರೀ ಕೊಡಮಣಿತ್ತಾಯ ಕ್ಷೇತ್ರದಲ್ಲಿ ಬ್ರಹ್ಮಕುಂಭಾಭಿಷೇಕ, ನಾಗಮಂಡಲ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಬಳಿಕ ಮಂಗಳೂರಿನ ದೈವಕೋಲದಲ್ಲಿ ಮಕ್ಕಳೊಂದಿಗೆ ಸಾಂಪ್ರದಾಯಿಕ ಉಡುಗೆಯಲ್ಲಿ ಪಾಲ್ಗೊಂಡಿದ್ದರು.