ಈಶಾನ್ಯ ಕರ್ನಾಟಕ ಪದವೀಧರ ಚುನಾವಣೆ,ಮತ ಎಣಿಕೆ ಅಧಿಕಾರಿ-ಸಿಬ್ಬಂದಿಗಳಿಗೆ ತರಬೇತಿ
ಕಲಬುರಗಿ,ಮೇ.29: ಈಶಾನ್ಯ ಕರ್ನಾಟಕ ಪದವೀಧರ ಕ್ಷೇತ್ರ ಚುನಾವಣೆಯ ಮತದಾನವು ಬರುವ ಜೂನ್ 3 ರಂದು ನಡೆದು ಜೂನ್ 6ಕ್ಕೆ ಮತ ಎಣಿಕೆ ಹಿನ್ನೆಲೆಯಲ್ಲಿ ಬುಧವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮತ ಎಣಿಕೆ ಅಧಿಕಾರಿ-ಸಿಬ್ಬಂದಿಗಳಿಗೆ ತರಬೇತಿ ಆಯೋಜಿಸಲಾಗಿತ್ತು.
ಕ್ಷೇತ್ರದ ಚುನಾವಣಾಧಿಕಾರಿಯಾಗಿರುವ ಪ್ರಾದೇಶಿಕ ಆಯುಕ್ತ ಕೃಷ್ಣ ಭಾಜಪೇಯಿ ಮತ್ತು ಸಹಾಯಕ ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರ ಸಮಕ್ಷಮದಲ್ಲಿ ನ್ಯಾಷನಲ್ ಲೇವಲ್ ಮಾಸ್ಟರ್ ಟ್ರೇನರ್ ಡಾ.ಶಶಿಶೇಖರ ರೆಡ್ಡಿ ಅವರು ಎಣಿಕೆ ಸಿಬ್ಬಂದಿಗಳಿಗೆ ಪೆÇೀಸ್ಟಲ್ ಬ್ಯಾಲೆಟ್ ಮೂಲಕ ಚಲಾಯಿಸುವ ಮತಪತ್ರವನ್ನು ಪುರಸ್ಕøತ, ತಿರಸ್ಕೃತ ಮತ ಎಂದು ಹೇಗೆ ನಿರ್ಧರಿಸಬೇಕು ಎಂಬಿತ್ಯಾದಿ ಎಣಿಕೆ ವಿಷಯಗಳ ಕುರಿತು ಸವಿಸ್ತಾರವಾಗಿ ಮಾಹಿತಿ ನೀಡಿದರು.
ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಸಹಾಯಕ ಆಯುಕ್ತ ಆಶಪ್ಪ ಪೂಜಾರಿ ಸೇರಿದಂತೆ ಮತ ಎಣಿಕೆಗೆ ನಿಯೋಜನೆಗೊಂಡ ಅಧಿಕಾರಿ-ಸಿಬ್ಬಂದಿಗಳು ತರಬೇತಿಯಲ್ಲಿ ಭಾಗಿಯಾಗಿದ್ದರು.