ಮೇ 31 ರಂದು ವಿಶ್ವ ತಂಬಾಕು ರಹಿತ ದಿನಾಚರಣೆ
ಕಲಬುರಗಿ:ಮೇ.28:ಕಲಬುರಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಹೆಚ್.ಸಿ.ಜಿ ಕ್ಯಾನ್ಸರ್ ಆಸ್ಪತ್ರೆ, ಎನ್.ಓ.ಹೆಚ್.ಪಿ., ಸರ್ಕಾರಿ ಪದವಿ ಮಹಾವಿದ್ಯಾಲಯ, ಎನ್.ಎಸ್.ಎಸ್.ಘಟಕ ಕಲಬುರಗಿ ಇವುಗಳ ಸಂಯುಕ್ತಾಶ್ರಯದಲ್ಲಿ “ತಂಬಾಕು ಉದ್ಯಮದ ಹಸ್ತಕ್ಷೇಪದಿಂದ ಮಕ್ಕಳನ್ನು ರಕ್ಷಿಸುವುದು” ಎಂಬ ಘೋಷವಾಕ್ಯದೊಂದಿಗೆ ವಿಶ್ವ ತಂಬಾಕು ರಹಿತ ದಿನಾಚರಣೆಯನ್ನು ಇದೇ ಮೇ 31 ರಂದು ಬೆಳಿಗ್ಗೆ 10.30 ಗಂಟೆಗೆ ಕಲಬುರಗಿಯ ಕುಸನೂರ ರಸ್ತೆಯ ಹೊಸ ಆರ್.ಟಿ.ಓ. ಕಚೇರಿ ಹತ್ತಿರವಿರುವ ಸರ್ಕಾರಿ ಪದವಿ ಮಹಾವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ.
ಕಲಬುರಗಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀನಿವಾಸ ನವಲೆ ಅವರು ವಿಶ್ವ ತಂಬಾಕು ರಹಿತ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸುವರು. ಕಲಬುರಗಿ ವಿಭಾಗದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ವಿಭಾಗೀಯ ಸಹ ನಿರ್ದೇಶಕ ಡಾ. ಎ.ಎಸ್. ರುದ್ರವಾಡಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ರತಿಕಾಂತ ಸ್ವಾಮಿ, ಗುಲಬರ್ಗಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಗುಪ್ತಲಿಂಗ ಪಾಟೀಲ, ಕಾರ್ಯದರ್ಶಿ ಬಿ.ಎಸ್. ನಾಶಿ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣಾಧಿಕಾರಿ ಡಾ. ಸುರೇಶ ಮೇಕಿನ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಎನ್.ಓ.ಹೆಚ್.ಪಿ. ಕಾರ್ಯಕ್ರಮ ಅಧಿಕಾರಿ ಸಂದ್ಯಾ ಕಾನೇಕರ್ ಅವರು ಬಾಯಿ ಕ್ಯಾನ್ಸರ್ ವಿಷಯ ಕುರಿತು, ಕಲಬುರಗಿ ಹೆಚ್.ಸಿ.ಜಿ. ಕ್ಯಾನ್ಸರ್ ಆಸ್ಪತ್ರೆಯ ವಿಕಿರಣ ಅಂಕೋಲಾಜಿ ಡಾ. ಶಾಂತಲಿಂಗ ನಿಗ್ಗುಡಗಿ ಅವರು ತಂಬಾಕು ಸೇವನೆಯಿಂದಾಗುವ ದುಷ್ಪಪರಿಣಾಮ ವಿಷಯ ಕುರಿತು ಮಾತನಾಡುವರು.
ಕಲಬುರಗಿ ಸರ್ಕಾರಿ ಪದವಿ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಸವಿತಾ ತಿವಾರಿ ಕಾರ್ಯಕ್ರಮದ ಅಧ್ಯಕ್ಷತೆವಹಿಸುವರು.