ಉಡುಪಿ: ಪ್ರತ್ಯೇಕ ಪ್ರಕರಣ: ಇಬ್ಬರು ನಾಪತ್ತೆ
ಉಡುಪಿ: ನಗರದ ಕಡಿಯಾಳಿಯ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ವಿಜಯ ಶೆಟ್ಟಿ(೫೭) ಎಂಬ ವ್ಯಕ್ತಿಯು ಸೆಪ್ಟಂಬರ್ ೬ ರಂದು ಮನೆಯಿಂದ ಹೊರಗೆ ಹೋದವರು ವಾಪಸು ಬಾರದೇ ನಾಪತ್ತೆಯಾಗಿರುತ್ತಾರೆ.
೧೫೭ ಸೆ.ಮೀ ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆ ಕಪ್ಪು ಮೈ ಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ, ತುಳು ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಹೆಚ್ಚಿನ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ವ್ಯಕ್ತಿ ನಾಪತ್ತೆ
ಉಡುಪಿ: ಮೂಲತಃ ಒಡಿಸ್ಸಾ ರಾಜ್ಯದ ಮಯೂರ್ಭಂಜ್ ಜಿಲ್ಲೆ ಸುಲಿಯಾಪದ ತಾಲೂಕು ಕದಾಕೋಥಾ ಗ್ರಾಮದ ನಿವಾಸಿ ಪ್ರಸ್ತುತ ನಗರದ ನಿಟ್ಟೂರಿನ ಬಾಳಿಗ ಫಿಶ್ನೆಟ್ ಒಡಿಸ್ಸಾ ಹಾಸ್ಟೆಲ್‌ನಲ್ಲಿ ವಾಸವಿದ್ದ ಬನಮಾಲಿ ನಾಯ್ಕೆ (೨೯) ಎಂಬ ವ್ಯಕ್ತಿಯು ಸೆಪ್ಟಂಬರ್ ೧೨ ರಿಂದ ನಾಪತ್ತೆಯಾಗಿರುತ್ತಾರೆ.
೧೭೦ ಸೆಂ.ಮೀ ಎತ್ತರ, ಕೋಲು ಮುಖ, ಸಾಧಾರಣ ಮೈಕಟ್ಟು, ಕಪ್ಪು ಮೈಬಣ್ಣ ಹೊಂದಿದ್ದ ಇವರು, ಹಿಂದಿ ಹಾಗೂ ಓಡಿಯಾ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ