ಪರಿಷತ್ ಚುನಾವಣೆ;  ಮೈತ್ರಿ ಅಭ್ಯರ್ಥಿ ಪರ  ಗಾಯಿತ್ರಿ ಸಿದ್ದೇಶ್ವರ್ ಪ್ರಚಾರ

ಸಂಜೆವಾಣಿ ವಾರ್ತೆ
ದಾವಣಗೆರೆ.ಮೇ.೨೮; ನಗರದ ಯು.ಬಿ.ಡಿ.ಟಿ ಕಾಲೇಜ್, ರಾಜನಹಳ್ಳಿ ಸೀತಮ್ಮ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜ್ ಹಾಗೂ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕರ್ನಾಟಕ ವಿಧಾನ ಪರಿಷತ್ತು ಚುನಾವಣೆ “ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ” ಬಿ.ಜೆ.ಪಿ ಮತ್ತು ಜೆ.ಡಿ.ಎಸ್. ಮೈತ್ರಿ ಅಭ್ಯರ್ಥಿಯಾದ ಡಾ. ವೈ.ಎ. ನಾರಾಯಣಸ್ವಾಮಿ ಪರವಾಗಿ ದಾವಣಗೆರೆ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾದ  ಗಾಯಿತ್ರಿ ಸಿದ್ದೇಶ್ವರರವರು ಮತಯಾಚನೆ ಮಾಡಿ ಪ್ರಸ್ತುತ ಶಿಕ್ಷಣ ಕ್ಷೇತ್ರದಲ್ಲಿ ಮೌಲ್ಯಧಾರಿತ ಶಿಕ್ಷಣಕ್ಕೆ ಬಿಜೆಪಿ ಮತ್ತು ಜೆಡಿಎಸ್. ಮೈತ್ರಿ ಅಭ್ಯರ್ಥಿಯನ್ನು ಗೆಲ್ಲಿಸಬೇಕು, ಈಗಿನ ಶಿಕ್ಷಣದಲ್ಲಿ ಕಾಂಗ್ರೆಸ್ ಸರ್ಕಾರದ ಹಸ್ತಕ್ಷೇಪದಿಂದ ಶಿಕ್ಷಣ ನೀತಿಯಲ್ಲಿ ಹಾಗೂ ಪರೀಕ್ಷೆಯಲ್ಲಿ ಗೊಂದಲದ ಗೂಡಾಗಿದ್ದು, ಶಿಕ್ಷಣ ಕ್ಷೇತ್ರದಲ್ಲಿ ಕಾಂಗ್ರೆಸ್ ಸರ್ಕಾರವು ಸಂಪೂರ್ಣವಾಗಿ ವೈಫಲ್ಯಗೊಂಡಿದ್ದು, ಇದರ ಪರಿಣಮವಾಗಿ ಪೋಷಕರಲ್ಲಿ ವಿದ್ಯಾರ್ಥಿಗಳಲ್ಲಿ ಮತ್ತು ಶಿಕ್ಷಕರಲ್ಲಿ ಗೊಂದಲವುಂಟಾಗಿದೆ. ಪ್ರಸ್ತುತ ಇದರ ಪರಿಹಾರಕ್ಕಾಗಿ ವಿಧಾನ ಪರಿಷತ್ತಿನ ಚುನಾವಣೆಯಲ್ಲಿ ನಮ್ಮ ಎನ್.ಡಿ.ಎ. ಅಭ್ಯರ್ಥಿಯಾದ ಡಾ. ವೈ.ಎ. ನಾರಾಯಣಸ್ವಾಮಿಯವರು ಮೂಲತಃ ಶಿಕ್ಷಕರಾಗಿದ್ದು, ಶಿಕ್ಷಕರ ಸಮಸ್ಯೆಗಳಿಗೆ ಪರಿಹಾರ ಹುಡುಕುವಲ್ಲಿ ಯಶಸ್ವಿಯಾಗುವರು ಅದುದರಿಂದ ಡಾ. ವೈ.ಎ. ನಾರಾಯಣಸ್ವಾಮಿಯವರಿಗೆ ಪ್ರಥಮ ಪ್ರಶಾಸ್ತ ಮತವನ್ನು ನೀಡುವ ಮೂಲಕ ಜಯಶೀಲರನ್ನಾಗಿ ಮಾಡುವಂತೆ ವಿನಂತಿಸಿಕೊಂಡರು.ಈ ಸಂಧರ್ಭದಲ್ಲಿ ಬಿ.ಜೆ.ಪಿ. ಜಿಲ್ಲಾಧ್ಯಕ್ಷರಾದ ಎನ್. ರಾಜಶೇಖರ್, ಮಾಜಿ ಸಚಿವರಾದ ಶ್ರೀ ಎಸ್.ಎ. ರವೀಂದ್ರನಾಥ್, ಮಾಜಿ ಶಾಸಕರಾದ ಎಂ. ಬಸವರಾಜನಾಯ್ಕ, ಮುಖಂಡರಾದ ಬಿ.ಎಸ್. ಜಗದೀಶ್, ಮಾಜಿ ಮಹಾಪೌರರಾದ ಎಸ್.ಟಿ. ವೀರೇಶ್, ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕರಾದ ಪ್ರಸನ್ನಕುಮಾರ್, ಮುಖಂಡರಾದ ಕೊಂಡಜ್ಜಿ ಜಯಪ್ರಕಾಶ್, ಮುಖಂಡರಾದ ಹೆಚ್.ಎನ್. ಶಿವಕುಮಾರ್, ಜಯಪ್ರಕಾಶ್, ಮಹಾನಗರ ಪಾಲಿಕೆ ಸದಸ್ಯರಾದ ಶಿವಾನಂದ, ಹಾಗೂ ಇನ್ನೂ ಆನೇಕ ಮುಖಂಡರು ಉಪಸ್ಥಿತರಿದ್ದರು.