ಮತ ಎಣಿಕೆ ಸಿಬ್ಬಂದಿಗೆ ತರಬೇತಿ
ಸಂಜೆವಾಣಿ ವಾರ್ತೆ
ಚಿತ್ರದುರ್ಗ.ಮೇ.೨೮; ಲೋಕಸಭಾ ಚುನಾವಣೆ-2024ಕ್ಕೆ ಸಂಬಂಧಿಸಿದಂತೆ ಅಂಚೆ ಮತಪತ್ರಗಳ ಮತ ಎಣಿಕೆ ಸಿಬ್ಬಂದಿಗೆ ಮೊದಲ ಹಂತದ ತರಬೇತಿ ಕಾರ್ಯಾಗಾರ ಚಿತ್ರದುರ್ಗ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಅಪರ ಜಿಲ್ಲಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ಕೈಗೊಳ್ಳಲಾಯಿತು.ತರಬೇತಿ ಕಾರ್ಯಾಗಾರದಲ್ಲಿ 12 ಸಹಾಯಕ ಮತ ಎಣಿಕೆ ಅಧಿಕಾರಿಗಳು, 13 ತಂಡಗಳ ಮತ ಎಣಿಕೆ ಸಿಬ್ಬಂದಿಗೆ ತರಬೇತಿ ನಡೆಯಿತು. ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅಂಚೆ ಮತಪತ್ರಗಳ ಮತ ಎಣಿಕೆ ಸಿಬ್ಬಂದಿಗೆ ಸೂಕ್ತ ಮಾರ್ಗದರ್ಶನ ನೀಡಿದರು.ಜಿಲ್ಲಾಮಟ್ಟದ ಮಾಸ್ಟರ್ ಟ್ರೈನರ್ ಎಸ್.ನಾಗಭೂಷಣ್ ಅವರು ಮತ ಎಣಿಕೆ ಸಿಬ್ಬಂದಿಗೆ ಸವಿವರವಾದ ತರಬೇತಿ ನಿಡಿದರು.ತರಬೇತಿಯಲ್ಲಿ ಜಿಲ್ಲಾ ತರಬೇತಿ ಮತ್ತು ನಿರ್ವಹಣಾ ಕೋಶದ ನೋಡಲ್ ಅಧಿಕಾರಿ ಜಗದೀಶ್ ಹೆಬ್ಬಳ್ಳಿ, ಲೀಡ್ ಬ್ಯಾಂಕ್ ವ್ಯವಸ್ಥಾಪಕ ತಿಪ್ಪೇಶ್ ಹಾಗೂ ಮತ ಎಣಿಕೆ ಅಧಿಕಾರಿಗಳು, ಸಿಬ್ಬಂದಿ ಇದ್ದರು.