ಬಿಜೆಪಿ ಹಣೆ ಬರಹಕ್ಕೆ ಶಿಕ್ಷಕರ‌ ನೇಮಕಾತಿ ಮಾಡಲಾಗಿಲ್ಲ; ಮಧು ಬಂಗಾರಪ್ಪ ಆರೋಪ

ಸಂಜೆವಾಣಿ ವಾರ್ತೆ
ಚಿತ್ರದುರ್ಗ,ಮೇ.28: ಇಷ್ಟು ವರ್ಷ ಬಿಜೆಪಿ ರಾಜ್ಯದಲ್ಲಿ ಹೊಲಸು ಮಾಡಿದ್ದು ನಾವು ಅದನ್ನು ಸರಿ ಮಾಡುತ್ತಿದ್ದೇವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.ಚಿತ್ರದುರ್ಗದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹಣೆ ಬರಹಕ್ಕೆ ಶಿಕ್ಷಕರ‌ ನೇಮಕಾತಿ ಮಾಡಲಾಗಿಲ್ಲ. ನಮ್ಮ ಸರ್ಕಾರ ಬಂದ ಬಳಿಕ ಶಿಕ್ಷಕರ ನೇಮಕಾತಿ ಮಾಡುತ್ತಿದ್ದೆವೆ. ಪಠ್ಯ ಪರಿಷ್ಕರಣೆ ಪ್ರಣಾಳಿಕೆಯಲ್ಲಿ ಹೇಳಿದಂತೆ ನಾವು ಮಾಡಿದ್ದೇವೆ ಎಂದರು.ಶಿಕ್ಷಣ ಸಚಿವರು ಕಟಿಂಗ್ ಮಾಡಿಸಿಕೊಳ್ಳಬೇಕು ಎಂಬ ಬಿಜೆಪಿ ರಾಜ್ಯಾದ್ಯಕ್ಷ ಬಿ ವೈ ವಿಜಯೇಂದ್ರ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ನನಗೆ ಕಟಿಂಗ್ ಮಾಡುವವರು ಫ್ರೀ ಇಲ್ಲ. ವಿಜಯೇಂದ್ರ ಫ್ರೀಯಿದ್ದರೆ ಬಂದು ಕಟಿಂಗ್ ಮಾಡಲಿ ಎಂದು ಮಧು ಬಂಗಾರಪ್ಪ ಟಾಂಗ್ ನೀಡಿದರು‌.ಬಿ.ವೈ.ವಿಜಯೇಂದ್ರ ತನ್ನ ಅಪ್ಪ ಮುಖ್ಯಮಂತ್ರಿ ಆಗಿದ್ದರೆಂಬ ಭ್ರಮೆಯಲ್ಲಿದ್ದಾರೆ. ಮೊದಲು ಆ ಭ್ರಮೆಯಿಂದ ಹೊರ ಬರಬೇಕು. ಬಿಜೆಪಿ ರಾಜ್ಯಾಧ್ಯಕ್ಷರಾಗಿ ಏನು ಮಾಡಬೇಕು ಎಂಬುದನ್ನು ಯೋಚಿಸಲಿ ಎಂದು ಸಲಹೆ ನೀಡಿದರು‌.ಚಿತ್ರರಂಗದ ಬಗ್ಗೆ ವಿಜಯೇಂದ್ರ ಮಾತಾಡುವ ಅಗತ್ಯ ಇಲ್ಲ.ನನ್ನ ಹಣಬರಹ ನಾನು ನೋಡಿಕೊಳ್ಳುತ್ತೇನೆ, ತೊಂದರೆಯಿಲ್ಲ. ಆದರೆ ಜೂನ್ 4ಕ್ಕೆ ಅವರ ಹಣೆ ಬರಹ ಅವರು ನೋಡಿಕೊಳ್ಳಲಿ ಎಂದು ವ್ಯಂಗ್ಯ ಮಾಡಿದರು‌.