ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣಾ ಪ್ರಚಾರ ಸಭೆ

ಸಂಜೆವಾಣಿ ವಾರ್ತೆ
ಹರಪನಹಳ್ಳಿ.ಮೇ.೨೭: ಪಕ್ಷ ಭೇಧ ಮರೆತು ನನಗೆ ಈ ಬಾರಿ ಬೆಂಬಲಿಸಿ ವಿಧಾನ ಪರಿಷತ್‌ನಲ್ಲಿ ನಿಮ್ಮ ಧ್ವನಿಯಾಗಿ ಕೆಲಸ ಮಾಡುತ್ತೇನೆ ಎಂದು ವಿಧಾನ ಪರಿಷತ್ ಈಶಾನ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ನಾರಾ ಪ್ರತಾಪ್ ರೆಡ್ಡಿ ಹೇಳಿದರು.ಪಟ್ಟಣದ ವಾಸವಿ ಕಲ್ಯಾಣ ಮಂಟಪದಲ್ಲಿ  ಆಯೋಜಿಸಿದ್ದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಮತ್ತು ಬಿಜೆಪಿ ಎರಡು ರಾಷ್ಟಿçÃಯ ಪಕ್ಷಗಳು ಪ್ರತಿ ಭಾರಿ ಈ ಚುನಾವಣೆಯಲ್ಲಿ ಕಲಬುರಗಿ, ಬೀದರ್ ರಾಯಚೂರು ಭಾಗಕ್ಕೆ ಅವಕಾಶ ನೀಡುತ್ತಾ ಬಂದಿವೆ ಇದರಿಂದ ಅಖಂಡ ಬಳ್ಳಾರಿ ಸೇರಿದಂತೆ ಕೊಪ್ಪಳ, ಯಾದಗಿರಿ ಜಿಲ್ಲೆಗೆ ಅನ್ಯಾಯವಾಗಿದೆ ಎಂದು ಆರೋಪಿಸಿದರು.ಕಳೆದ ಬಾರಿ ನಾನು ಈ ಚುನಾವಣೆಯಲ್ಲಿ ಸ್ಪರ್ಧೆ ಮಾಡಿ ಅಲ್ಪ ಮತಗಳಿಂದ ಸೋತಿದ್ದೇನೆ, ಈ ಬಾರಿ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದೇ ಆದರೂ ಪಕ್ಷ ನನಗೆ ಅವಕಾಶ ನೀಡಲಿಲ್ಲ, ಹಾಗಾಗಿ ನಾನು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದೇನೆ ನನಗೆ ಮೊದಲನೇ ಪ್ರಾಶಸ್ತö್ಯ ಮತವನ್ನು ನೀಡುವ ಮೂಲಕ ಒಮ್ಮೆ ಅವಕಾಶ ಮಾಡಿಕೊಡಿ ಎಂದು ಮತದಾರರಲ್ಲಿ ವಿನಂತಿ ಮಾಡಿಕೊಂಡರು.ಕನ್ನಡ ಸಾಹಿತ್ಯ ಪರಿಷತ್‌ನ ಜಿಲ್ಲಾ ಅಧ್ಯಕ್ಷ ನಿಷ್ಠಿ ರುದ್ರಪ್ಪ ಮಾತನಾಡಿ ಅಖಂಡ ಬಳ್ಳಾರಿ ಜಿಲ್ಲೆಯ ನಮ್ಮೆಲ್ಲರ ಪ್ರತಿನಿಧಿಯಾಗಿ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಪಕ್ಷೇತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿರುವ ನಾರಾ ಪ್ರತಾಪ್ ರೆಡ್ಡಿಯವರನ್ನು ಬೆಂಬಲಿಸೋಣ ಎಂದು ಕರೆ ನೀಡಿದರು.