ರಾಜ್ಯದ ಸರ್ಕಾರದಿಂದ ಸಂಪೂರ್ಣವಾಗಿ ಕಾನೂನು ಸುವ್ಯವಸ್ಥೆ
ಸಂಜೆವಾಣಿ ವಾರ್ತೆ
ಮಂಡ್ಯ.ಮೇ.27:- ರಾಜ್ಯದಲ್ಲಿ ಸರ್ಕಾರದಿಂದಾಗಿ ಸಂಪೂರ್ಣವಾಗಿ ಕಾನೂನು ಸುವ್ಯವಸ್ಥೆ ಹದಗೆಟ್ಟು ಹೋಗಿ ಅರಾಜಕತೆ ತಾಂಡವವಾಡುತ್ತಿದೆ ಎಂದು ಜಿಲ್ಲಾ ಬಿಜೆಪಿ ವಕ್ತಾರ ಸಿ.ಟಿ.ಮಂಜುನಾಥ್ ಆರೋಪಿಸಿದರು.
ಬಿಜೆಪಿ ಕಾರ್ಯಕರ್ತನನ್ನು ರಕ್ಷಣೆ ಮಾಡಿದರೆಂಬ ಕ್ಷುಲ್ಲಕ ಕಾರಣಕ್ಕೆ ಶಾಸಕರನ್ನು ಬಂಧಿಸಲು ಹತ್ತಾರು ಪೆÇಲೀಸರನ್ನು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕಳುಹಿಸುತ್ತದೆ. ಮತ್ತೊಂದೆಡೆ ಚನ್ನಗಿರಿ ಪೆÇಲೀಸ್ ಠಾಣೆ ಮೇಲೆ ದಾಳಿ ಮಾಡಿದ ಮತಾಂಧರ ಪರ ನಿಲ್ಲುತ್ತಾ ಪೆÇಲೀಸ್ ಅಧಿಕಾರಿಗಳನ್ನೇ ಅಮಾನತ್ತು ಮಾಡುತ್ತದೆ. ಇದು ಯಾವ ನೀತಿ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ಪ್ರಶ್ನಿಸಿದ್ದಾರೆ.
ಪೆÇಲೀಸರನ್ನು ತಮ್ಮ ಕೈಗೊಂಬೆ ಮಾಡಿಕೊಂಡು ಆಟ ಆಡಿಸುತ್ತಿರುವ ಪರಿಣಾಮ ಕಾನೂನು ಮತಾಂಧರ ತಾಳಕ್ಕೆ ಕುಣಿಯುತ್ತಿದೆ. ಹೀಗಾಗಿ ಯುವತಿಯರ ಮೇಲೆ ಅತ್ಯಾಚಾರ, ಕೊಲೆ, ಹ¯?ಲÉ, ನಡೆಯುತ್ತಿದೆ. ಭಯೋತ್ಫಾದನೆ, ಕೋಮುಗಲಭೆಗಳು ರಾಜ್ಯದಲ್ಲಿ ರಾರಾಜಿಸುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಕೈಗೆ ಅಧಿಕಾರ ಕೊಟ್ಟರೆ, ರೌಡಿಗಳ ಕೈಯಲ್ಲಿ ಮಚ್ಚು ಲಾಂಗು, ಉಗ್ರರ ಕೈಯಲ್ಲಿ ಬಾಂಬು ಕೊಟ್ಟಂತೆ ಎಂದು ಛೇಡಿಸಿದ ಅವರು, ಶಾಂತಿ, ಸುವ್ಯವಸ್ಥೆ, ಕಾನೂನು ಪರಿಪಾಲನೆಗೆ ಹೆಸರುವಾಸಿಯಾಗಿದ್ದ ಕರ್ನಾಟಕ ಕಾಂಗ್ರೆಸ್ ನೇತೃತ್ವದ ಆಡಳಿತದಲ್ಲಿ ಅಕ್ಷರಶಃ ರೌಡಿ ರಾಜ್ಯವಾಗಿ ಮಾರ್ಪಟ್ಟಿದೆ ಎಂದು ಕಿಡಿಕಾರಿದ್ದಾರೆ.
ಚನ್ನಗಿರಿಯಲ್ಲಿ ಪೆÇಲೀಸ್ ಠಾಣೆ ಧ್ವಂಸ ಮಾಡಿರುವ ಘಟನೆ, ಉಡುಪಿಯಲ್ಲಿ ನಡುರಸ್ತೆಯ¯?ಲÉ? ಗ್ಯಾಂಗ್ ವಾರ್ ನಡೆದಿರುವ ಘಟನೆ ಇವೆಲ್ಲ ರಾಜ್ಯದಲ್ಲಿ ಕಾನೂನಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎನ್ನುವುದು ಸ್ಪಷ್ಟವಾಗುತ್ತದೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಹತ್ಯೆಗಳು, ಅತ್ಯಾಚಾರಗಳು, ಗ್ಯಾಂಗ್ ವಾರ್ಗಳು, ಗಾಂಜಾ ಮಾರಾಟ ದಂಧೆಗಳು, ರೇವ್ ಪಾರ್ಟಿಗಳು, ಕೋಮು ಗಲಭೆಗಳು, ಗಲಾಟೆಗಳಿಂದ ಕರ್ನಾಟಕದ ಗೌರವ ಮಣ್ಣುಪಾಲಗುತ್ತಿದೆ. ನಿಮ್ಮ ಕೈಯಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ.
ಕನ್ನಡಿಗರು ನೆಮ್ಮದಿಯಿಂದ ಬದುಕಲು ಬಿಡಿ. ರಾಜ್ಯದಲ್ಲಿ ಪೆÇ?ಲೀಸರು ನಿಷ್ಪP?ಷÀಪಾತವಾಗಿ ಕರ್ತವ್ಯ ನಿರ್ವಹಿಸಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಮೇಶ್ವರಂ ಕೆಫೆ ಬಾಂಬ್ ಪ್ರಕರಣದಲ್ಲಿ ಬಂಧಿಯಾಗುತ್ತಿರುವ ಭಯೋತ್ಪಾದಕ ಶಕ್ತಿಗಳು ಈ ಘಟನೆಗಳ ಹಿಂದಿರುವ ಸಾಧ್ಯತೆ ತಳ್ಳಿಹಾಕುವಂತಿಲ್ಲ. ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಕಲ್ಪಿಸಬೇಕಾದ ಪೆÇಲೀಸರು ಹಾಗೂ ಪೆÇಲೀಸ್ ಠಾಣೆಗೇ ರಷÀಣೆ ಇಲ್ಲದ ಪರಿಸ್ಥಿತಿ ಉದ್ಭವಿಸಿದೆ ಎಂದರೆ ಪರಿಸ್ಥಿತಿ ಯಾವ ಹಂತ ತಲುಪುತ್ತಿದೆ ಎಂದು ಅಂದಾಜಿಸಬಹುದಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಬಿಹಾರದಲ್ಲಿ ಲಲ್ಲುಪ್ರಸಾದ್ ಯಾದವ್ ಆಡಳಿತ ನಡೆಸಿದ ದಿನಗಳು ಕರ್ನಾಟಕದಲ್ಲಿ ಮತ್ತೆ ತಲೆ ಎತ್ತುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಸರ್ವ ಜನಾಂಗದ ಶಾಂತಿಯ ತೋಟ’ಎಂದು ಕರೆದ ಕುವೆಂಪು ಕಲ್ಪನೆಯನ್ನು ಕೊಲ್ಲಲು ಹೊರಟಿರುವ ಕಾಂಗ್ರೆಸ್ ಸರ್ಕಾರ ಕರುನಾಡನ್ನು ಅಭದ್ರತೆಯ ಅಶಾಂತಿಯ ಕೊಂಪೆ ಮಾಡಲು ಹೊರಟಿದೆ. ಪೆÇಲೀಸರ ನೈತಿಕ ಶಕ್ತಿ ಸಂಪೂರ್ಣವಾಗಿ ಕುಗ್ಗಿಸುವ ವ್ಯವಸ್ಥೆಯ ಜಾಲ ಕೆಲಸ ಮಾಡುತ್ತಿದೆ ಎಂದು ದೂರಿದ್ದಾರೆ.
ಗೌರವಾನ್ವಿತ ರಾಜ್ಯಪಾಲರು ಈ ಕೂಡಲೇ ಮಧ್ಯ ಪ್ರವೇಶಿಸಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತು ಸರ್ಕಾರದಿಂದ ವರದಿ ಪಡೆಯಲಿ. ಅಂತೆಯೇ ಪೆÇಲೀಸ್ ಠಾಣೆಗಳಿಗೆ ದಾಳಿ ಮಾಡುತ್ತಿರುವ ಪರಿಸ್ಥಿತಿಯ ಹಿನ್ನೆಲೆಯಲ್ಲಿ ರಾಜ್ಯದ ಕಾನೂನು ಸುವ್ಯವಸ್ಥೆ ಸರಿ ದಾರಿಗೆ ಬರಲು ರಾಜ್ಯಪಾಲರು ಮಧ್ಯಪ್ರವೇಶಿಸುವಂತೆ ಮನವಿ ಮಾಡಿದ್ದಾರೆ.