ಮುಸ್ಲೀಮರನ್ನು ಒಬಿಸಿ ಪಟ್ಟಿಗೆ ಸೇರಿಸದಂತೆ ಪ್ರತಿಭಟನೆ
ಸಂಜೆವಾಣಿ ನ್ಯೂಸ್
ಮೈಸೂರು.ಮೇ.26:- ಕೋಲ್ಕತ್ತಾದಲ್ಲಿ ನ್ಯಾಯಾಲಯದ ಆದೇಶ ಉಲ್ಲಂಘಿಸಿ ಒಬಿಸಿ ಪಟ್ಟಿಗೆ ಮುಸ್ಲಿಂರನ್ನು ಸೇರಿಸುತ್ತಿರುವ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ನ್ಯಾಯಾಲಯ ಮುಂಭಾಗದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಾಯಿತು. ಮಮತಾ ಬ್ಯಾನರ್ಜಿ ಮುಸ್ಲಿಂರನ್ನು ಒಬಿಸಿ ಪಟ್ಟಿಗೆ ಸೇರಿಸಲು ಮುಂದಾಗಿದ್ದಾರೆ. ನ್ಯಾಯಾಲಯ ಒಬಿಸಿಗೆ ಸೇರಿಸಬಾರದು ಎಂದು ಆದೇಶಿ ನೀಡಿದ್ದರೂ ಅದನ್ನು ಉಲ್ಲಂಘಿಸಿ ಒಬಿಸಿಗೆ ಸೇರಿಸುತ್ತಿದ್ದಾರೆ ಎಂದು ಕಿಡಿ ಕಾರಿದರು.
ಕಾನೂನಿನ ಮುಂದೆ ಯಾರು ದೊಡ್ಡವರಲ್ಲ. ನ್ಯಾಯಾಲಯಕ್ಕೆ ನಾವೆಲ್ಲರೂ ತಲೆ ಬಾಗಲೇಬೇಕು. ಈಗಿದ್ದರು ಮಮತಾ ಬ್ಯಾನರ್ಜಿ ನ್ಯಾಯಾಲಯದ ಆದೇಶಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ. ಇದನ್ನು ಹಿಂದುಳಿದ ವರ್ಗಗಳ ಸಮುದಾಯ ತೀವ್ರವಾಗಿ ಖಂಡಿಸುತ್ತದೆ. ಒಬಿಸಿ ಪಟ್ಟಿಗೆ ಮುಸ್ಲಿಮರನ್ನು ಸೇರಿಸಿ ಹಿಂದುಳಿದವರಿಗೆ ಅನ್ಯಾಯ ಮಾಡಬಾರದು. ಹೀಗಾಗಿ ಯಾವುದೇ ಕಾರಣಕ್ಕೂ ಮುಸ್ಲೀಮರನ್ನು ಒಬಿಸಿ ಪಟ್ಟಿಗೆ ಸೇರಿದಬಾರದು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಬಿಜೆಪಿ ಗ್ರಾಮಾಂತರ ಅಧ್ಯಕ್ಷ ಎಲ್.ಆರ್.ಮಹದೇವಸ್ವಾಮಿ ಸೇರಿದಂತೆ ಹಲವರು ಮುಖಂಡರು ಭಾಗವಹಿಸಿದ್ದರು.