ಕಾಂಗ್ರೆಸ್ ಕಚೇರಿಯಲ್ಲಿ ನೆಹರು ಪುಣ್ಯದಿನಾಚರಣೆ
ಕಲಬುರಗಿ:ಮೇ.25: ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಮೇ 27ರಂದು ಬೆಳಿಗ್ಗೆ ಹತ್ತು ಗಂಟೆಗೆ ಮಾಜಿ ಪ್ರಧಾನಿ ಪಂಡಿತ ಜವಾಹರಲಾಲ್ ನೆಹರು ಅವರ ಪುಣ್ಯದಿನವನ್ನು ಆಚರಣೆ ಮಾಡಲಾಗುವುದು ಎಂದು ಪಕ್ಷದ ಜಿಲ್ಲಾಧ್ಯಕ್ಷ ಜಗದೇವ್ ಗುತ್ತೇದಾರ್ ಕಾಳಗಿ ಅವರು ತಿಳಿಸಿದ್ದಾರೆ.
ಕಾರ್ಯಕ್ರಮಕ್ಕೆ ಕಾಂಗ್ರೆಸ್ ಪಕ್ಷದ ಎಲ್ಲಾ ಹಾಲಿ ಹಾಗೂ ಮಾಜಿ ಸಂಸದರು, ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ನಿಗಮ, ಮಂಡಳಿ ಅಧ್ಯಕ್ಷರು, ಕೆಪಿಸಿಸಿ ಪದಾಧಿಕಾರಿಗಳು ಹಾಗೂ ಸದಸ್ಯರು, ಜಿಲ್ಲಾ ಕಾಂಗ್ರೆಸ್ ಸಮಿತಿ ಮಾಜಿ ಅಧ್ಯಕ್ಷರು, ಡಿಸಿಸಿ ಡೇಲಿಗೇಟ್ ಸದಸ್ಯರು, ಜಿಲ್ಲಾ ಕಾಂಗ್ರೆಸ್ ಸಮಿತಿ ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಜಿಲ್ಲಾ ಕಾಂಗ್ರೆಸ್ ಸಮಿತಿ ವಿವಿಧ ಮೂಂಚೂಣಿ ಘಟಕ, ವಿಭಾಗಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಕಾಂಗ್ರೆಸ್ ಪಕ್ಷದ ಪುರಪಂಚಾಯಿತಿ, ಎಪಿಎಂಸಿಯ ಹಾಲಿ ಹಾಗೂ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು, ಮಹಾ ನಗರ ಪಾಲಿಕೆಯ ಹಾಲಿ ಮತ್ತು ಮಾಜಿ ಸದಸ್ಯರುಗಳು, ಮಹಿಳೆಯರು, ಯುವಕರು ಕಾಂಗ್ರೆಸ್ ಪಕ್ಷದ ಎಲ್ಲ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಹೆಚ್ಚು ಹೆಚ್ಚು ಸಂಖ್ಯೆಯಲ್ಲಿ ಆಗಮಿಸಬೇಕು ಎಂದು ಅವರು ಹೇಳಿಕೆಯಲ್ಲಿ ಕೋರಿದ್ದಾರೆ.