ಮೈಸೂರಿನಲ್ಲಿ ಮಾವು, ಹಲಸಿನ ಘಮಲು
ಸಂಜೆವಾಣಿ ನ್ಯೂಸ್
ಮೈಸೂರು.ಮೇ.25:- ಸಾಂಸ್ಕøತಿಕ ನಗರಿ ಮೈಸೂರಿನಲ್ಲಿ ಮಾವಿನ ಘಮಲೇರಿದ್ದು, ಉತ್ಪಾದಕರಿಂದ ಗ್ರಾಹಕರಿಗೆ ನೇರವಾಗಿ ದೊರೆಯುವಂತೆ ಮಾಡುವ ಸಲುವಾಗಿ ಆಯೋಜಿಸಿರುವ ಮೂರು ದಿನಗಳ ಮಾವು, ಹಲಸು ಮೇಳಕ್ಕೆ ಶುಕ್ರವಾರ ಚಾಲನೆ ದೊರೆಯಿತು.
ಜಿಲ್ಲಾಡಳಿತ, ಜಿಪಂ, ತೋಟಗಾರಿಕೆ ಇಲಾಖೆ ಸಹಯೋಗದಲ್ಲಿ ಹಾರ್ಡಿಂಜ್ ವೃತ್ತದ ಬಳಿ ಇರುವ ಕುಪ್ಪಣ್ಣ ಪಾರ್ಕ್‍ನಲ್ಲಿ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಮಾವು, ಹಲಸು ಮೇಳ ಉದ್ಘಾಟಿಸಿದರು. ಒಂದೇ ಸೂರಿನಡಿ 12ಕ್ಕೂ ಹೆಚ್ಚು ತಳಿಯ ಮಾವಿನ ಹಣ್ಣುಗಳು ದೊರೆಯುತ್ತಿದ್ದು, ಸಾರ್ವಜನಿಕರು ಮೊದಲ ದಿನವೇ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡಿ ತಮಗೆ ಇಷ್ಟವಾದ ಹಣ್ಣುಗಳನ್ನು ಖರೀದಿಸಿದರು. ಉದ್ಯಾನವನದ ಆವರಣದಲ್ಲಿ 35 ಮಳಿಗೆಗಳನ್ನು ತೆರೆಯಲಾಗಿದ್ದು, ರೈತರಿಗೆ ಉಚಿತವಾಗಿ ಮಳಿಗೆಗಳನ್ನು ನೀಡಲಾಗಿದೆ. ಮೈಸೂರು, ರಾಮನಗರ, ಮಂಡ್ಯ ಜಿಲ್ಲೆಯ ರೈತರು ವಿವಿಧ ತಳಿಯ ಮಾವಿನ ಹಣ್ಣುಗಳನ್ನು ಮಾರಾಟ ಮಾಡುತ್ತಿದ್ದಾರೆ. ಪ್ರತಿಯೊಂದು ಮಳಿಗೆಗಳ ಮುಂದೆ ದರ ಪಟ್ಟಿ ಹಾಕಲಾಗಿದ್ದು, ಗ್ರಾಹಕರಿಗೆ ಕಡಿಮೆ ಮತ್ತು ಹೆಚ್ಚಿನ ಬೆಲೆಗೆ ಮಾರಾಟ ಮಾಡದಂತೆ ಸೂಚಿಸಲಾಗಿದೆ.
ರೈತರು ಗ್ರಾಹಕರಿಗೆ ಸಹಕಾರಿ: ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ, ತೋಟಗಾರಿಕೆ ಇಲಾಖೆಯಿಂದ ಮೂರು ದಿನಗಳ ಮಾವು ಮತ್ತು ಹಲಸಿನ ಮೇಳ ಆಯೋಜಿಸಿರುವುದರಿಂದ ರೈತರಿಗೆ ಮತ್ತು ಗ್ರಾಹಕರಿಗೆ ಅನುಕೂಲವಾಗಲಿದೆ. ಈ ಬಾರಿ ಇಳುವರಿ ಕಡಿಮೆಯಾಗಿದ್ದು ಮಾರುಕಟ್ಟೆಯಲ್ಲಿ ಮಾವು ಕಡಿಮೆಯಾಗಿದೆ. ರೈತರಿಂದ ನೇರವಾಗಿ ಗ್ರಾಹಕರು ಖರೀದಿಸಲಿ ಎಂಬ ಕಾರಣಕ್ಕೆ ಈ ಮೇಳ ಆಯೋಜಿಸಲಾಗಿದೆ. ಮಾರುಕಟ್ಟೆಯಲ್ಲಿ ಮಾವು ಖರೀದಿ ಮಾಡಲು ಹಿಂಜರಿಯುವ ಗ್ರಾಹಕರು ಇಲ್ಲಿಗೆ ಬಂದು ಕೊಳ್ಳಬಹುದು. ಮೇಳದಲ್ಲಿ ನೈಸರ್ಗಿಕವಾಗಿ ಹಾಗೂ ರೈತರೇ ನೇರವಾಗಿ ಮಾವು ತರುವುದರಿಂದ ಹೆಚ್ಚು ಬೆಲೆ ಇರುವುದಿಲ್ಲ. ಗ್ರಾಹಕರು ರೈತರನ್ನು ಪೆÇ್ರೀತ್ಸಾಹಿಸಲು ಮಾವು ಮೇಳಕ್ಕೆ ಆಗಮಿಸಿ ಖರೀದಿಸುವಂತೆ ಸಲಹೆ ನೀಡಿದರು.
ಮೈಸೂರು, ಮಂಡ್ಯ, ರಾಮನಗರ, ಉತ್ತರ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ಮಹಾರಾಷ್ಟ್ರ ರಾಜ್ಯಗಳಲ್ಲಿ ಸಿಗುವಂತಹ ಮಾವಿನ ಹಣ್ಣುಗಳನ್ನು ಒಂದೇ ಸೂರಿನಡಿ ಮಾರಾಟ ಮಾಡಲಾಗುತ್ತಿದೆ. ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಮೈಸೂರಿಗೆ ಬರುತ್ತಿರುವುದರಿಂದ ಹೆಚ್ಚಿನ ವಹಿವಾಟು ನಡೆಯುವ ಸಾಧ್ಯತೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಹೆಚ್ಚು ಮಳೆಯಿಂದ ಅನಾಹುತ: ಕೆ.ಸಾಲುಂಡಿ ಕಲುಷಿತ ನೀರಿನ ಕುರಿತು ಮಾತನಾಡಿ, ಒಂದು ಬೋರ್‍ವೆಲ್‍ಗೆ ಚರಂಡಿ ನೀರು ಮಿಶ್ರಣವಾಗಿ ಈ ರೀತಿ ಸಮಸ್ಯೆಯಾಗಿದೆ. ವಾಡಿಕೆಯಂತೆ 4 ಮಿ.ಮೀ ಮಳೆಯಾಗುತ್ತಿತ್ತು. ಆದರೆ ಅಂದು 40 ಮಿ.ಮೀ ಮಳೆ ಸುರಿದ ಕಾರಣ ಚರಂಡಿ ನೀರು ಬೋರ್ ವೆಲ್‍ಗೆ ಸೇರಿ ಘಟನೆ ಸಂಭವಿಸಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಎಲ್ಲಾ ಆಯುಕ್ತರಿಗೆ ಮತ್ತು ಪಿಡಿಓಗಳಿಗೆ ನೀರಿನ ಶುದ್ದೀಕರಣದ ಬಗ್ಗೆ ಗಮನಹರಿಸುವಂತೆ ಸೂಚಿಸಲಾಗಿದೆ. ಹಾಗೆಯೇ ಗ್ರಾಮದಲ್ಲಿ 120 ಜನರ ಸ್ಯಾಂಪಲ್ ಪಡೆದು ಪರೀಕ್ಷಿಸಲಾಗಿದೆ ಎಂದರು.
ನಿರಂತರವಾಗಿ ಭೇದಿಯಾಗಿ ನಿರ್ಜಲೀಕರಣವಾದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಿ ಸೂಕ್ತ ಚಿಕಿತ್ಸೆ ಪಡದುಕೊಳ್ಳಿ. ಖಾಸಗಿ ಆಸ್ಪತ್ರೆಯಲ್ಲಿ ಸಾಧ್ಯವಾಗದಿದ್ದರೆ ಎಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುವುದು. ಸಾರ್ವಜನಿಕರು ಮನೆಗಳಲ್ಲಿ ಕಾಯಿಸಿದ ನೀರನ್ನು ಸೇವಿಸಿ. ಜತೆಗೆ ಸಾರ್ವಜನಿಕ ಸ್ಥಳಗಳಲ್ಲಿ ಶುಚಿತ್ವ ಕಾಪಾಡುವವರ ಬಳಿ ತಿಂಡಿ ತಿನಿಸು ತಿನ್ನಿ ಎಂದು ಸಲಹೆ ನೀಡಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ಎಂ.ಗಾಯಿತ್ರಿ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಮಂಜುನಾಥ್ ಅಂಗಡಿ ಸೇರಿದಂತೆ ಹಲವರು ಹಾಜರಿದ್ದರು.
ಸಸ್ಯ ಸಂತೆ ಪ್ರದರ್ಶನ
ಯೋಜನೆಯಡಿ ತೋಟಗಾರಿಕೆ ಬೆಳೆಗಳಿಗೆ ಪೆÇ್ರೀತ್ಸಾಹಿಸಲು ರೂಪಿಸಿರುವ ಕಾರ್ಯಕ್ರಮಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಕುಪ್ಪಣ್ಣ ಪಾರ್ಕ್‍ನಲ್ಲಿ ವಿವಿಧ ತೋಟಗಾರಿಕಾ ಕ್ಷೇತ್ರ ನರ್ಸರಿಗಳ ಸಸ್ಯ ಸಂತೆ ಏರ್ಪಡಿಸಲಾಗಿದೆ. ತೆಂಗು, ಸಪೆÇೀಟ, ಪಪ್ಪಾಯಿ, ಅಡಿಕೆ, ಮಾವು, ನುಗ್ಗೆ, ಸೀಬೆ, ನೇರಳೆ, ನಿಂಬೆ, ಕರಿಬೇವು, ಹಿರಳಿ, ಹುಣಸೆ, ಸೀತಾಫಲ, ಚಕ್ರಮುನಿ, ವೀಳ್ಯದೆಲೆ, ಬೆಟ್ಟದ ನೆಲ್ಲಿ, ಬೆಣ್ಣೆಹಣ್ಣು, ಹಲಸು ಸಸ್ಯಗಳನ್ನು ಪ್ರದರ್ಶಿಸಲಾಗಿದೆ. ಸಸ್ಯಗಳ ಪ್ರದರ್ಶನ ಜತೆಗೆ ಮಾರಾಟವನ್ನೂ ಮಾಡಲಾಗುತ್ತಿದೆ. ಜತೆಗೆ ಮನ್ರೇಗಾ, ತೋಟಗಾರಿಕೆ ಇಲಾಖೆ ವತಿಯಿಂದ ಸಿಗುವ ಪೆÇ್ರೀತ್ಸಾಹಧನದ ಬಗ್ಗೆ ಮಾಹಿತಿ ಫಲಕವನ್ನೂ ಹಾಕಲಾಗಿದೆ.