ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಅಖಿಲಗೌಡ ಪಾಟೀಲ ಚಾಲನೆ
ಕೊಲ್ಹಾರ:ಸೆ.೨೪: ಬಲಿಷ್ಠವಾದ ಆರ್ಥಿಕತೆಯ ಭಾರತ ನಿರ್ಮಾಣಕ್ಕಾಗಿ ಬಿಜೆಪಿ ಪಕ್ಷದ ಸದಸ್ಯತ್ವ ಪಡೆದು ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಬೇಕು ಎಂದು ಬಿಜೆಪಿ ಯುವ ಮೋರ್ಚಾದ ಮಂಡಲ ಅಧ್ಯಕ್ಷ ಅಖಿಲಗೌಡ ಪಾಟೀಲ ಹೇಳಿದರು
ತಾಲ್ಲೂಕಿನ ಸುಳಖೋಡ ಗ್ರಾಮದಲ್ಲಿ ರವಿವಾರ ನಡೆಸಿದ ಬಿಜೆಪಿ ಸದಸ್ಯತ್ವ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ವಿಶ್ವದ ಅತೀ ದೊಡ್ಡ ರಾಜಕೀಯ ಪಕ್ಷವಾದ ಬಿಜೆಪಿ ಸದಸ್ಯತ್ವ ಅಭಿಯಾನ ದೇಶದಾದ್ಯಂತ ಯಶಸ್ವಿಯಾಗಿ ನಡೆಯುತ್ತಿದ್ದು, ದೇಶದ ಪ್ರತಿಯೊಬ್ಬ ನಾಗರಿಕರೂ ಬಿಜೆಪಿಯ ಸದಸ್ಯರಾಗಿ ದೇಶದ ಅಭಿವೃದ್ಧಿಗೆ ಕೈಜೋಡಿಸಬೇಕು. ದೇಶದ ಹಿತಕ್ಕೆ ಯಾವ ಪಕ್ಷ ಸೂಕ್ತ ಎಂಬುದನ್ನು ಅರಿತು, ಜನರು ಸ್ವಯಂ ಪ್ರೇರಣೆಯಿಂದ ಸದಸ್ಯತ್ವ ಹೊಂದಲು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಸಹಿತ ಅನೇಕರು ಉಪಸ್ಥಿತರಿದ್ದರು.