ಸಿಯುಕೆ ಪ್ರಾಧ್ಯಾಪಕಿ ಡಾ. ಜಯದೇವಿ ಜಂಗಮ ಶೆಟ್ಟಿ ಅವರಿಗೆ ಸಂಸ್ಕøತಿ ಸಂಗಮ ಪ್ರಶಸ್ತಿ
ಕಲಬುರಗಿ:ಸೆ.23:ಖ್ಯಾತ ಹಿಂದೂಸ್ತಾನಿ ಗಾಯಕಿ, ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಸಂಗೀತ ಮತ್ತು ಲಲಿತ ಕಲಾ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಜಯದೇವಿ ಜಂಗಮಶೆಟ್ಟಿಯವರು ಪ್ರತಿಷ್ಠಿತ ಸಂಸ್ಕೃತಿ ಸಂಗಮ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆಂದು ಬೆಂಗಳೂರಿನ ಸಾಹಿತ್ಯ ಸೇವಾ ಪ್ರತಿμÁ್ಠನದ ಅಧ್ಯಕ್ಷರು, ಕರ್ನಾಟಕ ಪ್ರದೇಶ ಗಡಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಡಾ. ಸಿ. ಸೋಮಶೇಖರ ಅವರು ತಿಳಿಸಿದ್ದಾರೆ.
ನಿವೃತ್ತ ಐ.ಎ. ಎಸ್ ಅಧಿಕಾರಿ ಡಾ. ಸಿ ಸೋಮಶೇಖರ-ಶ್ರೀಮತಿ ಎನ್. ಸರ್ವಮಂಗಳ ಸಾಹಿತ್ಯ ಸೇವಾ ಪ್ರತಿμÁ್ಠನವು 2015 ರಿಂದ ಜಾನಪದ, ವಚನ, ದಾಸ ಮತ್ತು ಸಂಗೀತ ಕ್ಷೇತ್ರದಲ್ಲಿ ಗಣನೀಯ ಸಾಧನೆಗೈದ ಹಿರಿಯ ಸಾಧಕರಿಗೆ ಸಂಸ್ಕೃತಿ ಸಂಗಮ ಪ್ರಶಸ್ತಿ ನೀಡುತ್ತಾ ಬಂದಿದೆ.
2024ನೇ ಸಾಲಿನ ಸಂಸ್ಕೃತಿ ಸಂಗಮ ಪ್ರಶಸ್ತಿಯನ್ನು ಸಂಗೀತ ಕ್ಷೇತ್ರದ ಗಣನೀಯ ಸಾಧನೆಗಾಗಿ ಡಾ. ಜಯದೇವಿ ಜಂಗಮಶೆಟ್ಟಿಯವರಿಗೆ ನೀಡಲಾಗಿದೆ. ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ, ವಚನ ಗಾಯನ, ದಾಸವಾಣಿ, ಭಜನ್, ಸೂಫಿ ಮತ್ತು ತತ್ವಪದಗಳ ಗಾಯನದಲ್ಲಿ ಅಪಾರ ಸಾಧನೆ ಮಾಡಿರುವ ಡಾ. ಜಯದೇವಿ ಜಂಗಮಶೆಟ್ಟಿಯವರನ್ನು ಅಕ್ಟೋಬರ್ ತಿಂಗಳಲ್ಲಿ ಬೆಂಗಳೂರಿನಲ್ಲಿ ಜರುಗುವ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವ ವಿ. ಸೋಮಣ್ಣ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಸಂಗೀತ ಕ್ಷೇತ್ರದ ಸಾಧನೆಗೆ ಕೊಡುವ ಈ ಪ್ರಶಸ್ತಿಯನ್ನು ಈ ಹಿಂದೆ ಪಂ. ನರಸಿಂಹಲು ವಡವಾಟಿ, ಪಂ. ಎಂ. ವೆಂಕಟೇಶಕುಮಾರ್, ವಿದುಷಿ ಎಂ. ಎಸ್. ಶೀಲಾ, ನೃತ್ಯ ಕಲಾವಿದೆ ಶ್ರೀಮತಿ ವೈಜಯಂತಿ ಕಾಶಿ, ಸುಗಮ ಸಂಗೀತ ಕಲಾವಿದರಾದ ಡಾ. ಎಚ್ ಆರ್. ಲೀಲಾವತಿ, ಶ್ರೀಮತಿ ರತ್ನಾಮಾಲಾ ಪ್ರಕಾಶ್ ಅವರಿಗೆ ನೀಡಿ ಗೌರವಿಸಲಾಗಿದೆ.