ಕಾಂಗ್ರೆಸ್ ಸರ್ಕಾರ ರಾಜ್ಯವನ್ನು ಅಭಿವೃದ್ಧಿಯ ಹಾದಿಯಲ್ಲಿ ಮುನ್ನಡೆಸುತ್ತಿದೆ: ಎಂ.ಆರ್ ಕಲಾದಗಿ
ಕೊಲ್ಹಾರ:ಮೇ.23: ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳು ನಿಲ್ಲಲ್ಲ. ಲೋಕಸಭೆ ಚುನಾವಣೆಯ ಬಳಿಕವೂ ಯಥಾವತ್ತಾಗಿ ಮುಂದುವರಿಯಲಿವೆ ಎಂದು ಕಾಂಗ್ರೆಸ್ ಮುಖಂಡ ಎಂ.ಆರ್ ಕಲಾದಗಿ ಅವರು ತಿಳಿಸಿದ್ದಾರೆ. ಲೋಕಸಭೆ ಚುನಾವಣೆ ನಂತರ ಪಂಚ ಗ್ಯಾರಂಟಿಗಳು ನಿಲ್ಲಲಿವೆ ಎನ್ನುವ ಬಿಜೆಪಿಯವರ ಗಾಳಿ ಸುದ್ದಿಯನ್ನು ಯಾರೂ ನಂಬಬಾರದು. ಮುಖ್ಯ ಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದ ರಾಜ್ಯ ಸರ್ಕಾರ ವಿಧಾನಸಭೆ ಚುನಾವಣೆಗೆ ಮುನ್ನ ಘೋಷಿಸಿದಂತೆ ಶಕ್ತಿ, ಅನ್ನ ಭಾಗ್ಯ, ಗೃಹ ಜ್ಯೋತಿ, ಗೃಹ ಲಕ್ಷ್ಮಿ ಹಾಗೂ ಯುವ ನಿಧಿ ಗ್ಯಾರಂಟಿಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದೆ. ಗ್ಯಾರಂಟಿಗಳಿಗೆ ಈಗ ಒಂದು ವರ್ಷ ತುಂಬಿದೆ ಎಂದು ಅವರು ಹೇಳಿಕೆಯಲ್ಲಿ ತೀವ್ರ ಸಂತೋಷ ವ್ಯಕ್ತಪಡಿಸಿದ್ದಾರೆ.
ರಾಜ್ಯವನ್ನು ಅಭಿವೃದ್ಧಿಯ ಹಾದಿಯಲ್ಲಿ ಮುನ್ನಡೆಸುತ್ತಿದೆ ಎಂದು ಅವರು ಶ್ಲಾಘಿಸಿದ್ದಾರೆ.