ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಪೂರ್ವಭಾವಿ ಸಭೆ
ಕಲಬುರಗಿ:ಸೆ.23: 2020-21 ನೇ ಸಾಲಿನಿಂದ ಮೂರು ವರ್ಷಗಳ ಸಾಧನೆಯ ಬಗ್ಗೆ ಪ್ರಗತಿ ಪರಿಶೀಲನಾ ಸಭೆಯನ್ನು ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಅಧ್ಯಕ್ಷತೆಯಲ್ಲಿ ಜರುಗಿತು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆ ಕರ್ನಾಟಕ ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ಪಿ.ಎಂ. ನರೇಂದ್ರಸ್ವಾಮಿ ಇವರ ನೇತೃತ್ವದ ಸಮಿತಿಯು ಇದೇ ಸೆಪ್ಟೆಂಬರ್ 25 ರಂದು ಬರುವ ಹಿನ್ನಲೆಯಲ್ಲಿ ಜಿಲ್ಲೆಗೆ ಸಂಬಂಧಿಸಿದಂತೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದವರ ಅಭಿವೃದ್ಧಿ, ಕಲ್ಯಾಣ, ಏಳಿಗೆಗೆ ಹಮ್ಮಿಕೊಂಡಿರುವ ಕಾರ್ಯಕ್ರಮಗಳು ಹಾಗೂ ಯೋಜನೆಗಳ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಲಿರುವುದರಿಂದ ಜಿಲ್ಲಾಧಿಕಾರಿಗಳು ಪ್ರತಿಯೊಂದು ಇಲಾಖೆಗಳು ಎಸ್.ಸಿ.ಎಸ್.ಪಿ. ಮತ್ತು ಟಿ.ಎಸ್.ಪಿ ಮಾಹಿತಿಯನ್ನು ಸಂಪೂರ್ಣವಾಗಿ ಪಡೆದುಕೊಂಡರು ಅಧಿಕಾರಿಗಳು ಸಮಿತಿಗೆ ಎದುರು ತಾವು ಸಾಧಿಸಿದ ಭೌತಿಕ ಮತ್ತು ಆರ್ಥಿಕ ಗುರಿಯನ್ನು ಸರಿಯಾದ ಮಾಹಿತಿ ನೀಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಲೋಕೋಪಯೋಗಿ ಇಲಾಖೆ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಜೆಸ್ಕಾಂ ಇಲಾಖೆಗಳ ಮಾಹಿತಿ ಪಡೆದು ಕಾಮಗಾರಿಗಳ ಸಾಧಿಸಿ ಗುರಿಯನ್ನು ಪರಿಶೀಲಿಸಿದರು ಅನುದಾನ ಬಿಡುಗಡೆಯಾಗಿದೆ ಇಲ್ಲ ಎಂಬ ಮಾಹಿತಿಯನ್ನು ಪಡೆದುಕೊಂಡರು. ಕಾಮಗಾರಿಗಳ ವಿಳಂಬ ಆಗಿರುವ ಬಗ್ಗೆ ಮಾಹಿತಿ ಪಡೆದುಕೊಂಡರು.
ಯಾರು ತಮ್ಮ ತಮ್ಮ ಮಾಹಿತಿ ಕೊಟ್ಟಿರುವುದಿಲ್ಲ ಅತಿ ತುರ್ತಾಗಿ ಅಧಿಕಾರಿಗಳು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಎಂ. ಅಲ್ಲಾಭಕ್ಷ ಅವರಿಗೆ ಮಾಹಿತಿ ನಾಳೆ ಸಲ್ಲಿಸಲು ತಿಳಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಶ್ರೀನಿವಾಸ ಅಡ್ಡೂರು, ಡಿಸಿಪಿ ಕನಿಕಾ ಸಿಕ್ರಿವಾಲ್, ಜಿಲ್ಲಾ ಪಂಚಾಯತ್ ಸಿ.ಇ.ಓ. ಭಂವರ್ ಸಿಂಗ್ ಮೀನಾ, ಉಪಅರಣ್ಯ ಸಂರಕ್ಷಣಾಧಿಕಾರಿ ಅಮಿತ ಪಟೇಲ್, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಿಗೆ ಪ್ರೊಬೇಷನರಿ ಐ.ಎ.ಎಸ್. ಮೀನಾಕ್ಷಿ ಆರ್ಯ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.