ರಾಷ್ಟ್ರೀಯ ಪೋಷಣ ಮಾಸಾಚರಣೆ ಉದ್ಘಾಟನೆ
ಕಲಬುರಗಿ:ಸೆ.23:ರಾಷ್ಟ್ರೀಯ ಪೋಷಣ ಮಾಸಾಚರಣೆ-2024ರ ಅಂಗವಾಗಿ ಕಲಬುರಗಿ (ನಗರ) ಶಿಶು ಅಭಿವೃದ್ಧಿ ಯೋಜನೆ ಯೋಜನೆಯ ವತಿಯಿಂದ 2024-25 ನೇ ಸಾಲಿಗೆ ರಾಷ್ಟ್ರೀಯ ಪೋಷಣ ಮಾಸಾಚರಣೆ ಕಾರ್ಯಕ್ರಮವನ್ನು ಕಲಬುರಗಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಶ್ರೀನಿವಾಸ ನವಲೆ ಅವರು ಶನಿವಾರ ಕಲಬುರಗಿ ನಗರದ ನ್ಯೂ ರೆಹಮತ ನಗರದ ಗುಲ್ಶನ್ ಅರಾಫತ್ ಕಾಲೋನಿಯ (ಬಿ) ವಲಯದ-01ನೇ ಅಂಗನವಾಡಿ ಕೇಂದ್ರದಲ್ಲಿ ಉದ್ಘಾಟಿಸಿದರು.
ನಂತರ ಅವರು ಮಾತನಾಡಿ, ಎಲ್ಲಾ ಗೃಹಿಣಿಯರು ತಮ್ಮ ಮನೆಯಲ್ಲಿ ಒಳ್ಳೆಯ ಪೌಷ್ಠಿಕ ಆಹಾರವನ್ನು ತಯಾರಿಸಿ ತಮ್ಮ ಕುಟುಂಬದ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಮನೆಯಲ್ಲಿ ತಯಾರು ಮಾಡಿದ ಆಹಾರವನ್ನು ಸೇವನೆ ಮಾಡದೆ ಹೊರಗಿನ ಆಹಾರವನ್ನು ಮಕ್ಕಳಿಗೆ ತಿನ್ನಿಸುತ್ತಾರೆ. ಇದರಿಂದ ಅಪೌಷ್ಟಿಕತೆ ಹೆಚ್ಚಾಗುತ್ತದೆ. ಆದಷ್ಟು ಹಣ್ಣುಗಳು, ತರಕಾರಿ, ಮೊಳಕೆ ಕಾಳು ಸೇವನೆ ಮಾಡಬೇಕು ಎಂದು ತಿಳಿಸಿದರು.
ಕಲಬುರಗಿ (ನಗರ) ಶಿಶು ಅಭಿವೃಧ್ಧಿ ಯೋಜನಾಧಿಕಾರಿ ಭೀಮರಾಯ ಕಣ್ಣೂರ ಅವರು ಮಾತನಾಡಿ, ಪೆÇೀಷಣ ಅಭಿಯಾನ ಯೋಜನೆ ಕುರಿತು ಮಾತನಾಡಿ, ಪೆÇೀಷಣ ಮಾಸಾಚರಣೆಯನ್ನು ಪ್ರತಿ ವರ್ಷ ಸೆಪ್ಟೆಂಬರ್ ತಿಂಗಳಿನಲ್ಲಿ ಆಚರಿಸಲಾಗುತ್ತಿದೆ. 0-6 ವರ್ಷದ ಮಕ್ಕಳು, ಕಿಶೋರಿಯರು, ಗರ್ಭಿಣಿ ಹಾಗೂ ಬಾಣಂತಿಯರ ಪೌಷ್ಠಿಕ ಮಟ್ಟವನ್ನು ಸುಧಾರಣೆ ಮಾಡುವುದು, ಕಡಿಮೆ ತೂಕದ ಮಕ್ಕಳ ಜನನ ಪ್ರಮಾಣವನ್ನು ನಿಯಂತ್ರಿಸುವುದು, ಬಾಣಂತಿ ಹಾಗೂ ಮಕ್ಕಳಲ್ಲಿ ರಕ್ತ ಹೀನತೆಯನ್ನು ತಡೆಗಟ್ಟುವುದು ಈ ಪೆÇೀಷಣ ಅಭಿಯಾನದ ಮುಖ್ಯ ಗುರಿಯಾಗಿದೆ ಎಂದರು.
ಪೆÇೀಷಣ ಮಾಸಾಚರಣೆಯನ್ನು ಜಿಲ್ಲಾ, ತಾಲೂಕು ಮತ್ತು ಅಂಗನವಾಡಿ ಕೇಂದ್ರ ಪ್ರತಿ ದಿನ ಹಂತ ಹಂತವಾಗಿ ವಿವಿಧ ಚಟುವಟಿಕೆಗಳನ್ನು ಮಾಡುವ ಮೂಲಕ ಆಚರಿಸಲಾಗುತ್ತದೆ. ಅಂಗನವಾಡಿ, ಶಾಲೆ, ಸೇರಿದಂತೆ ಇತರ ಸಾರ್ವಜನಿಕ ಸ್ಥಳಗಳಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತದೆ. ಇದರ ಜೊತೆಗೆ, ಬಾಣಂತಿಯರಿಗೆ ಮೊದಲ ಸಾವಿರ ದಿನ ಹಾಗೂ ಎದೆ ಹಾಲು ಉಣಿಸುವುದರ ಮಹತ್ವದ ಬಗ್ಗೆ ಮಾಹಿತಿ ನೀಡಲಾಗುತ್ತದೆ. ಪ್ರತಿದಿನ ಕಲಬುರಗಿ ನಗರ ಯೋಜನೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಪೆÇೀಷಣ ಮಾಸಾಚರಣೆಯನ್ನು ಆಚರಿಸಲಾಗುತ್ತದೆ. ಈ ವೇಳೆ ಸುತ್ತಮುತ್ತಲಿನ ಸಾರ್ವಜನಿಕರು, ಮಹಿಳೆಯರು ಹಾಗೂ ಸಣ್ಣ ಮಕ್ಕಳನ್ನು ಕಾರ್ಯಕ್ರಮಕ್ಕೆ ಕರೆದು ಅಪೌಷ್ಠಿಕ ನಿವಾರಣೆ ಸಂಬಂಧ ಜಾಗೃತಿ ಮೂಡಿಸಲಾಗುತ್ತದೆ ಎಂದು ಅವರು ಹೇಳಿದರು.
ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ|| ನಾಗಯ್ಯ ಮಠಪತಿ, ಯೋಜನೆಯ ಹಿರಿಯ ಮೇಲ್ವಿಚಾರಕಿ ಅಶ್ವಿನಿ ಭದ್ರಶೆಟ್ಟಿ, ಕಲಬುರಗಿ ನ್ಯೂ ರೆಹಮತ ನಗರ (ಬಿ) ವಲಯದ ವಲಯ ಮೇಲ್ವಿಚಾರಕಿ ವಿಜಯಲಕ್ಷ್ಮಿ ಹಾಗೂ ಯೋಜನೆಯ ವಲಯ ಮೇಲ್ವಿಚಾರಿಕಿಯರು, ಅಂಗನವಾಡಿ ಕಾರ್ಯಕರ್ತೆಯರು, ಫಲಾನುಭವಿಗಳಾದ ಮಕ್ಕಳು ಮತ್ತು ತಾಯಂದಿರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕಲಬುರಗಿ (ನಗರ) ಶಿಶು ಅಭಿವೃದ್ಧಿ ಯೋಜನೆ ಯೋಜನೆಯ ವಲಯ ಮೇಲ್ವಿಚಾರಕಿ ವಿಜಯಲಕ್ಷ್ಮಿ ವಂದಿಸಿದರು.