ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವರ ಪ್ರವಾಸ
ಕಲಬುರಗಿ:ಸೆ.23:ರಾಜ್ಯದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಎಸ್. ಮಧು ಬಂಗಾರಪ್ಪ ಅವರು ಬೆಂಗಳೂರಿನಿಂದ ಸ್ಟಾರ್ ಏರ್ ವಿಮಾನದ ಮೂಲಕ ಸೆಪ್ಟೆಂಬರ್ 25 ರಂದು ಬುಧವಾರ ಬೆಳಿಗ್ಗೆ 9.20 ಗಂಟೆಗೆ ಕಲಬುರಗಿಗೆ ಆಗಮಿಸುವರು. ನಂತರ ಸಚಿವರು ಕಲಬುರಗಿಯಿಂದ ಯಾದಗಿರಿಗೆ ಪ್ರಯಾಣಿಸಿ ನಿಗದಿತ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ನಂತರ ಮರಳಿ ಸಂಜೆ 6.30 ಗಂಟೆಗೆ ಯಾದಗಿರಿಯಿಂದ ಕಲಬುರಗಿಗೆ ಆಗಮಿಸಿ, ರಾತ್ರಿ 8.35 ಗಂಟೆಗೆ ಕಲಬುರಗಿಯಿಂದ ರೈಲಿನ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು.